ಮಡಿಕೇರಿ, ಜ. ೨೮: ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ವತಿಯಿಂದ ಹುತಾತ್ಮರ ದಿನ ಪ್ರಯುಕ್ತ ಪೂಜ್ಯ ರಾಷ್ಟçಪಿತ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಜನವರಿ, ೩೦ ರಂದು ಬೆಳಿಗ್ಗೆ ೯.೩೦ ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆ ಕಚೇರಿಯಿಂದ ಮೆರವಣಿಗೆಯಲ್ಲಿ ಪೊಲೀಸ್ ಗೌರವ ರಕ್ಷೆಯೊಂದಿಗೆ ತೆಗೆದುಕೊಂಡು ಹೋಗಿ ಗಾಂಧಿ ಮಂಟಪದ ಆವರಣದಲ್ಲಿ ಇರಿಸಿ ಬೆಳಿಗ್ಗೆ ೧೦.೩೦ ಗಂಟೆಗೆ ಸರ್ವಧರ್ಮ ಪ್ರಾರ್ಥನೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.