ಬೆಂಗಳೂರು, ಜ. ೨೯: ಸದಾ ಒತ್ತಡದಲ್ಲೇ ಕರ್ತವ್ಯ ನಿರ್ವಹಿಸುವ ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀA ಸಿಹಿ ಸುದ್ದಿ ನೀಡಿದ್ದಾರೆ. ಇಲಾಖೆಯ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಕೋರಿದರೆ ಕಡ್ಡಾಯವಾಗಿ ಮಂಜೂರು ಮಾಡಬೇಕು ಎಂದು ಎಲ್ಲಾ ಘಟಕಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿರುತ್ತದೆ. ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಪುನಶ್ಚೇತನಗೊಳ್ಳಲು ಹಾಗೂ ಕುಟುಂಬದೊAದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಿಂದ ಸಿಬ್ಬಂದಿಯ ಮನೋಬಲ ವೃದ್ಧಿಯಾಗಿ, ಒತ್ತಡ ಕಡಿಮೆಯಾಗುತ್ತದೆ. ಆದ್ದರಿಂದ ವಿಶೇಷ ಸಂದರ್ಭದಲ್ಲಿ ರಜೆ ಕೋರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ತಪ್ಪದೆ ರಜೆ ಮಂಜೂರು ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ. - ಕೋವರ್ ಕೊಲ್ಲಿ ಇಂದ್ರೇಶ್