ವೀರಾಜಪೇಟೆ, ಜ. ೨೯: ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಅವರು ವೀರಾಜಪೇಟೆ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ ಸಂಬAಧಿಸಿದAತೆ ಸಂಘದ ವತಿಯಿಂದ ಪ್ರಸ್ತಾಪಿಸಲಾದ ಎಲ್ಲಾ ಬೇಡಿಕೆಗಳು ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಅರುಣ್ ಮಾಚಯ್ಯ ಅವರ ಗಮನಕ್ಕೆ ತರಲಾಯಿತು. ಪ್ರಸ್ತಾಪಿಸಲಾದ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.

ಕ್ರೀಡಾಂಗಣ ಆವರಣದಲ್ಲಿ ಈಜುಕೊಳ (ಸ್ವಿಮ್ಮಿಂಗ್ ಪೂಲ್) ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನು ಪರಿಶೀಲಿಸಿದರು. ಹಳೆಯ ಒಳಾಂಗಣ ಕ್ರೀಡಾಂಗಣವನ್ನು ತೆರವುಗೊಳಿಸಿ ಹೊಸದಾಗಿ ಸುಸಜ್ಜಿತ ಕಟ್ಟಡವನ್ನು ನಿರ್ಮಿಸುವ ಭರವಸೆ ನೀಡಿದರು. ಇದರಿಂದ ಸುತ್ತಮುತ್ತಲಿನ ಪ್ರದೇಶದ ಮಕ್ಕಳು, ವಸತಿನಿಲಯ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕ್ರೀಡಾ ಪ್ರೇಮಿ ಹಾಗೂ ಬ್ಯಾಡ್ಮಿಂಟನ್ ಆಟಗಾರ ಎಂ. ಅರುಣ್ ಪೂವಯ್ಯ ಅವರು ವೀರಾಜಪೇಟೆ ಒಳಾಂಗಣ ಬ್ಯಾಡ್ಮಿಂಟನ್ ಕ್ರೀಡಾಂಗಣದ ಬಗ್ಗೆ ಅತ್ಯಂತ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಬೇಸಿಗೆ ರಜೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿ ಮೂಡುವುದನ್ನು ಗಮನದಲ್ಲಿಟ್ಟುಕೊಂಡು, ಪ್ರಸ್ತುತ ವುಡನ್ ಫ್ಲೋರಿಂಗ್‌ನಲ್ಲಿರುವ ಬ್ಯಾಡ್ಮಿಂಟನ್ ಕೋರ್ಟ್ಗಳ ಮೇಲೆ ಉತ್ತಮ ಗುಣಮಟ್ಟದ ಸಿಂಥೆಟಿಕ್ ಮ್ಯಾಟ್ ಅಳವಡಿಸಲು ಕ್ರಮವಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭ ವೀರಾಜಪೇಟೆ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಕಾರ್ಯದರ್ಶಿ ಸುಮೇಶ್ ಪಿ.ಜಿ, ಖಜಾಂಚಿ ಇರ್ಷಾದ್, ಸಂಘದ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.