ನಾಪೋಕ್ಲು, ಜ. ೩೦: ಕಕ್ಕಬೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವು ಕಕ್ಕಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷ ಕೆ.ಎ. ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಕ್ಕಳಿಂದ ವಿವಿಧ ಕಲಿಕಾ ಚಟುವಟಿಕೆಗಳನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯ ವಿಜೇತರರಿಗೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನಗಳನ್ನು ವಿತರಿಸಲಾಯಿತು.

ಈ ಸಂದರ್ಭ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೊಂಗೆರ ಶಿಲ್ಪಾ, ಕಕ್ಕಬ್ಬೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ವೈ. ಅಶೋಕ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಸಫಿಯ, ಇಂದಿರಾ, ಕಕ್ಕಬ್ಬೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಕಲ್ಪನಾ ಪಿ.ಆರ್, ಯವ ಕಪಾಡಿ ಶಾಲೆಯ ಎಸ್‌ಡಿಎಂಸಿ ಸದಸ್ಯೆ ಗಿರಿಜಾ, ಕಕ್ಕಬ್ಬೆ ಶಾಲೆ ಯ ಮುಖ್ಯೋಪಾ ಧ್ಯಾಯಿನಿ ಮಾಲತಿ, ಕ್ಲಸ್ಟರ್‌ನ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .

ದಾನಿಗಳಾದ ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿನ್ನಪ್ಪ ಅವರು ವಿದ್ಯಾರ್ಥಿಗಳಿಗೆ ಸೇರಿದಂತೆ ಆಗಮಿಸಿದ ಸರ್ವರಿಗೂ ಊಟದ ವ್ಯವಸ್ಥೆಯನ್ನು ಮಾಡಿಸಿದ್ದರು.

ಶಾಲೆಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಕಲ್ಪನಾ ಪಿ.ಆರ್. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿಯರಾದ ಆಶಿಕ, ಸಾಜಿದಾ ಅವರು ಕಾರ್ಯಕ್ರಮವನ್ನು ನಿರ್ವಹಿಸಿ, ಮಮತಾ ವಂದಿಸಿದರು.