ಮಡಿಕೇರಿ, ಜ. ೩೧: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಗಳ ಪೈಕಿ ಮಡಿಕೇರಿಯಲ್ಲಿ ನಡೆದ ೮೦ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ನಾ. ಡಿಸೋಜಾ ಮಕ್ಕಳ ಸಾಹಿತ್ಯ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆಯನ್ನು ಮಡಿಕೇರಿಯ ಮಹದೇವಪೇಟೆಯಲ್ಲಿರುವ ಎ.ಎಲ್.ಜಿ ಕ್ರೆಸೆಂಟ್ ಶಾಲೆಯಲ್ಲಿ ಫೆ. ೧೦ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಏರ್ಪಡಿಸಲಾಗಿದೆ.
ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆಗಳಿಂದ ಓರ್ವ ಅಥವಾ ಇಬ್ಬರು ವಿದ್ಯಾರ್ಥಿಗಳು ಕಥಾ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಫೆ. ೫ ರ ಒಳಗಾಗಿ ೯೧೧೩೮೯೨೩೯೬ ಮೊಬೈಲ್ ಸಂಖ್ಯೆಗೆ ವಾಟ್ಸಾö್ಯಪ್ ಮೂಲಕ ಕಳುಹಿಸಬಹುದು ಅಥವಾ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುದರ್ಶನ ವೃತ್ತದ ಬಳಿ, ಮಡಿಕೇರಿ. ಈ ವಿಳಾಸಕ್ಕೂ ಪತ್ರ ಮುಖೇನ ಕಳುಹಿಸಬಹುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ತಿಳಿಸಿದ್ದಾರೆ.