ಕಣಿವೆ, ಜ. ೩೦: ಸುತ್ತೂರು ಜಗದ್ಗುರು ಡಾ. ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಫೆ.೧೯ ರಂದು ತೊರೆನೂರು ವಿರಕ್ತ ಮಠಕ್ಕೆ ಆಗಮಿಸಲಿದ್ದಾರೆ. ಶ್ರೀ ಮಠದ ಮೂಲಗುರುಗಳ ಸಂಸ್ಮರಣೋತ್ಸವ ಹಾಗೂ ಶ್ರೀ ಮಹಾಂತ ಸ್ವಾಮೀಜಿಗಳ ೧೩ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ಸುತ್ತೂರು ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ.
ಈ ಸಂಬAಧ ತೊರೆನೂರು ಮಠದಲ್ಲಿ ಶ್ರೀ ಸದಾಶಿವ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಅಧ್ಯಕ್ಷ ಹೆಚ್. ವಿ.ಶಿವಪ್ಪ ತಿಳಿಸಿದರು.
ತಾ.೧೯ ರಂದು ತೊರೆನೂರು ಶ್ರೀ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಮಠಾಧಿಪತಿಗಳು, ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಎಂಎಲ್ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಕೊಡಗು ವಿವಿ ಕುಲಪತಿಗಳಾದ ಡಾ. ಅಶೋಕ್ ಸಂಗಪ್ಪ ಆಲೂರ ಮತ್ತಿತರರು ಆಗಮಿಸಲಿದ್ದಾರೆ.
ಸಭೆಯಲ್ಲಿ ಕೊಡಗು ವೀರಶೈವ ಮಹಾಸಭಾ ಪ್ರಧಾನ ಕಾರ್ಯದರ್ಶಿ ಸಾಂಬ ಶಿವಯ್ಯ, ಉಪಾಧ್ಯಕ್ಷ ಹೆಚ್.ಪಿ. ಉದಯಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ, ಕುಶಾಲನಗರ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಹೆಚ್.ಎಂ. ಮಧುಸೂದನ್, ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ, ಶುಭಶೇಖರ್, ನಿರ್ದೇಶಕರಾದ ಲೋಕೇಶ್, ತೊರೆನೂರು ಸಹಕಾರ ಸಂಘದ ಅಧ್ಯಕ್ಷ ಟಿ.ಬಿ. ಜಗದೀಶ್, ಶಿರಂಗಾಲ ಸಹಕಾರ ಸಂಘದ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ತೊರೆನೂರು ವಿರೂಪಾಕ್ಷ, ಶಿವಾನಂದ ಇದ್ದರು.