ಕುಶಾಲನಗರ, ಜ. ೩೦: ಕುಶಾಲನಗರದ ರಥಬೀದಿಯಲ್ಲಿರುವ ಶ್ರೀ ಕನ್ನಿಕಾ ಪರಮೇಶ್ವರಿ ದೇವಾಲಯದ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಬೆಳಗ್ಗೆ ದೇವಾಲಯದಲ್ಲಿ ಪ್ರಾರ್ಥನೆ, ಉಗ್ರಾಣ ಮುಹೂರ್ತ ಮಹಾ ಸಂಕಲ್ಪ ನಾಂದಿ ಸ್ಥಾಪನೆ ಗೋಪೂಜೆ ಗಣಪತಿ ಯಾಗ ನಂತರ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ನಂತರ ಪೂರ್ಣಾಹುತಿ ಮಹಾಪೂಜೆ ಪ್ರಸಾದ ವಿನಿಯೋಗ ನಡೆಯಿತು. ಸಂಜೆ ಐದು ಗಂಟೆಗೆ ದುರ್ಗಾ ನಮಸ್ಕಾರ ಪೂಜೆ ವಾಸ್ತು ಶಾಂತಿ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವು. ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಮುಂಭಾಗದ ವೇದಿಕೆಯಲ್ಲಿ ದಾಸವಾಣಿ ಕಾರ್ಯಕ್ರಮವನ್ನು ವಿದ್ವಾನ್ ಡಾ.ವಿದ್ಯಾ ಭೂಷಣ್ ಮತ್ತು ಕುಮಾರಿ ಮೇಧಾ ಭೂಷಣ್ ತಂಡದವರಿAದ ನಡೆಯಿತು. ದಾಸವಾಣಿ ಕಾರ್ಯಕ್ರಮ ನೆರೆದ ಪ್ರೇಕ್ಷಕರ ಮನಸೂರೆಗೊಂಡಿತು.

ಈ ಸಂದರ್ಭ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಉಪಾಧ್ಯಕ್ಷ ಬಿ.ಎಲ್. ಅಶೋಕ್ ಕುಮಾರ್, ಕಾರ್ಯದರ್ಶಿ ಕೆ. ಪ್ರವೀಣ್, ಖಜಾಂಚಿ ಪಿ.ಎಸ್. ಪ್ರಶಾಂತ್ ಮತ್ತು ಪದಾಧಿಕಾರಿಗಳು ಇದ್ದರು. ಬ್ರಹ್ಮಕಲಶೋತ್ಸವ ಅಂಗವಾಗಿ ತಾ. ೩೧ ರಂದು (ಇಂದು) ಇಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು ಸಂಜೆ ವಿದುಷಿ ಕುಮಾರಿ ಸಾಧ್ವಿನಿ ಕೊಪ್ಪ ಮತ್ತು ತಂಡದವರಿAದ ಭಕ್ತಿ ಸಂಗೀತ ವೇದಿಕೆ ಕಾರ್ಯಕ್ರಮ ನಡೆಯಲಿದೆ.