ಮಡಿಕೇರಿ, ಜ. ೩೦: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ವತಿಯಿಂದ ನೀಡಲಾಗುವ ಸ್ವಾಮಿ ವಿವೇಕಾನಂದ ಸದ್ಭಾವನಾ ರಾಜ್ಯ ಪ್ರಶಸ್ತಿಗೆ ಮಡಿಕೇರಿ ತಾಲೂಕು ಯುವ ಒಕ್ಕೂಟದ ಅಧ್ಯಕ್ಷ, ಬಿಳಿಗೇರಿ ಗ್ರಾಮದ ಅರ್ವತೋಕ್ಲುವಿನ ಬಾಳಾಡಿ ದಿಲೀಪ್ ಕುಮಾರ್ ಆಯ್ಕೆಯಾಗಿದ್ದಾರೆ.

ಜಿಲ್ಲೆ ಹಾಗೂ ತಾಲೂಕುಮಟ್ಟದಲ್ಲಿ ವಿವಿಧ ಯುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಇವರ ಸಮಾಜ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ತಾ. ೩೧ ರಂದು ವಿಜಯಪುರದ ಮುದ್ದೆಬಿಹಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಅವರು ತಿಳಿಸಿದ್ದಾರೆ.