ಸೋಮವಾರಪೇಟೆ, ಜ. ೩೧: ಹೋಂ ಸ್ಟೇ ಮತ್ತು ಟೂರಿಸಂ ಅಸೋಸಿಯೇಷನ್ ತ್ರೆöÊಮಾಸಿಕ ಸಭೆಯು ಅಧ್ಯಕ್ಷ ಸಿ.ಕೆ. ರೋಹಿತ್ ಅಧ್ಯಕ್ಷತೆಯಲ್ಲಿ ಕಾರೆಕೊಪ್ಪದ ಖಾಸಗಿ ರೆಸಾರ್ಟ್ನಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬೇಡಿಕೆಯಿದೆ. ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯನ್ನು ಅತ್ಯುತ್ತಮ ಸುಧಾರಿತ ಪ್ರವಾಸಿ ಸ್ಥಳವನ್ನಾಗಿ ಮಾಡಲು ಸರ್ಕಾರ ಈಗಾಗಲೇ ರೂಪುರೇಷೆಗಳನ್ನು ತಯಾರಿಸಿದೆ. ಪ್ರತಿ ತಾಲೂಕಿನಲ್ಲೂ ಪ್ರಮುಖ ಆಕರ್ಷಿತ ಪ್ರವಾಸಿ ಸ್ಥಳಗಳನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ ಮತ್ತು ಹೊಟೇಲ್ ನಿರ್ಮಾಣ ಮಾಡಲು ಸರ್ಕಾರದಿಂದ ಶೇಕಡ ೨೫% ಸಹಾಯಧನ ಒದಗಿಸುತ್ತದೆ ಎಂದು ಮಾಹಿತಿ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಹೇಮಂತ್ ಮಾತನಾಡಿ, ಐದು ವರ್ಷದ ಹಳೆಯ ಹೋಂ ಸ್ಟೇಗಳನ್ನು ಅಭಿವೃದ್ಧಿಪಡಿಸಲು ಎಸ್.ಬಿ.ಐ. ಬ್ಯಾಂಕ್‌ನಿAದ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಆಧಾರ ರಹಿತವಾಗಿ ನೀಡಲಾಗುತ್ತಿದೆ ತಿಳಿಸಿದರು. ಈ ಸಂದರ್ಭ ಹೋಂ ಸ್ಟೇ ಅಸೋಸಿಯೇಷನ್ ಉಪಾಧ್ಯಕ್ಷ ಯೋಗೇಶ್ ಪಟೇಲ್, ಕಾರ್ಯದರ್ಶಿ ಅಭಿನಂದನ್, ಖಜಾಂಜಿ ಪ್ರೀತಂ ಡಿ.ಪಿ. ಹಾಗೂ ಸದಸ್ಯರು ಹಾಜರಿದ್ದರು.