ನಾಪೋಕ್ಲು,ಜ.೩೦: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ವೀರಾಜಪೇಟೆ ತಾಲೂಕು ಘಟಕದ ವತಿಯಿಂದ, ಕೊಡಗು ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್ ಬೆಳ್ಯಪ್ಪ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಆನ್‌ಲೈನ್ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯು ವೀರಾಜಪೇಟೆ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಒಂದರಿAದ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ, ೪ ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವಿಡಿಯೋವನ್ನು ಕರಿನೆರವಂಡ ಡ್ಯಾನಿ ಕುಶಾಲಪ್ಪ ಅವರ ವಾಟ್ಸಾö್ಯಪ್ ಸಂಖ್ಯೆ ೯೬೧೧೪೭೮೫೩೯ಗೆ ದಿನಾಂಕ ಫೆ.೫ರೊಳಗಾಗಿ ತಲುಪುವಂತೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ವೀರಾಜಪೇಟೆ ತಾಲೂಕು ಅಧ್ಯಕ್ಷರಾದ ಮುಕ್ಕಾಟಿರ ಕಾವೇರಮ್ಮ ಕರುಂಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.