ಸೋಮವಾರಪೇಟೆ, ಜ. ೩೦: ತಾಲೂಕು ಹಿಂದೂ ಸಂಗಮ ಸಮಿತಿಯ ವತಿಯಿಂದ ಫೆ. ೧ರಂದು (ನಾಳೆ) ಸೋಮವಾರಪೇಟೆ ಪಟ್ಟಣದಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಿದ್ದು, ಈ ಸಂಬAಧ ಪಟ್ಟಣದ ಮಹಿಳಾ ಸಮಾಜದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿಂದೂ ಸಂಗಮ ಆಯೋಜನಾ ಸಮಿತಿಯ ತಾಲೂಕು ಅಧ್ಯಕ್ಷ ಕೆ.ಟಿ. ಸನತ್, ಹಿಂದೂತ್ವದ ಉಳಿವಿಗಾಗಿ, ರಾಷ್ಟç ರಕ್ಷಣೆಗಾಗಿ, ಹಿಂದೂ ರಕ್ಷಣೆಯ ಸಂಕಲ್ಪದೊAದಿಗೆ ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

ಹಿಂದೂ ಸಮಾಜದಲ್ಲಿ ಏಕತೆ, ಸಾಮರಸ್ಯ, ಸಾಮಾಜಿಕ ಪರಿವರ್ತನೆ, ಧಾರ್ಮಿಕ ಹಾಗೂ ದೇಶಭಕ್ತಿಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಹಿಂದೂ ಸಂಗಮ ಆಯೋಜಿಸಲಾಗಿದೆ. ಪಟ್ಟಣ ಮಾತ್ರವಲ್ಲದೇ ಸುತ್ತಮುತ್ತ ಗ್ರಾಮೀಣ ಭಾಗದಿಂದಲೂ ಹಿಂದೂ ಸಮುದಾಯದವರು ಭಾಗಿಯಾಗಲಿದ್ದಾರೆ ಎಂದರು.

ಕಾರ್ಯಕ್ರಮದ ತಾಲೂಕು ಆಯೋಜಕ ಬಿ.ಎ.ಭಾಸ್ಕರ್ ಮಾತನಾಡಿ, ಸಮಾಜದಲ್ಲಿನ ಎಲ್ಲಾ ಜನಾಂಗಗಳ ಬಾಂಧವರನ್ನು ಒಗ್ಗೂಡಿಸಿಕೊಂಡು ಆಚರಿಸುವ ಆಚರಣೆಯ ಮೂಲಕ ಹಿಂದೂ ಸಂಘಟನೆಗಳಿಗೆ ಬಲ ತುಂಬುವುದು. ಶಿಸ್ತು, ದೇಶಾಭಿಮಾನ, ಧೈರ್ಯ, ಪ್ರಾಮಾಣಿಕತೆಯಿಂದ ಕೂಡಿದ ಸಂಪನ್ಮೂಲ ವ್ಯಕ್ತಿಗಳ ನಿರ್ಮಾಣ ಮಾಡುವ ಮೂಲಕ ಸಮಾಜವನ್ನು ಸದೃಢಗೊಳಿಸುವ ಪ್ರಯತ್ನ ಇದಾಗಿದೆ ಎಂದು ತಿಳಿಸಿದರು.

ಫೆ. ೧ರಂದು ಬೆಳಗ್ಗೆ ೯.೩೦ ಗಂಟೆಗೆ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಬಳಿಯಿಂದ ಹೊರಡಲಿರುವ ಶೋಭಾ ಯಾತ್ರೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಚನ್ನಬಸಪ್ಪ ಸಭಾಂಗಣದ ಸಮೀಪದ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ಸಮಾಪನಗೊಳ್ಳಲಿದೆ. ನಂತರ ೧೧.೩೦ಕ್ಕೆ ಮೈದಾನದಲ್ಲಿನ ವೇದಿಕೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಳ್ಳೂರು ಮಠದ ಧರ್ಮಗುರುಗಳಾದ ಶ್ರೀ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಾಂತ ಪ್ರಚಾರಕರಾದ ಗುರುಪ್ರಸಾದ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದರು.

ಸಭೆಯಲ್ಲಿ ತಾಲೂಕು ಗೌರವಾಧ್ಯಕ್ಷ ಎಸ್.ಎಲ್. ಸೀತಾರಾಮ್, ಕಾರ್ಯದರ್ಶಿ ಎಸ್. ಎನ್. ಸೋಮಶೇಖರ್, ನಗರಾಧ್ಯಕ್ಷ ಎನ್.ಎನ್.ದಯಾನಂದ, ಸಮಿತಿ ಸದಸ್ಯರಾದ ಬನ್ನಳ್ಳಿ ಗೋಪಾಲ್, ಹಾಗೂ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.