ಸೋಮವಾರಪೇಟೆ, ಜ. ೩೦: ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಕ್ಕಳ ಗ್ರಾಮ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್‌ಕೆ. ವಿನೋದ್ ಕುಮಾರ್ ಅಧ್ಯಕ್ಷತೆಯಲ್ಲಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆಯಿತು.
ಸಭೆಯಲ್ಲಿ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ, ತಮ್ಮ ಶಾಲೆಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಶೌಚಾಲಯ, ಕುಡಿಯುವ ನೀರು, ಗ್ರಂಥಾಲಯ, ಆಟದ ಮೈದಾನ ಸೇರಿದಂತೆ ಶಿಕ್ಷಣ ಅಭಿವೃದ್ಧಿಗೆ ಪೂರಕವಾದ ವಿಷಯಗಳ ಬಗ್ಗೆ ಮನವರಿಕೆ ಮಾಡಿದರು. ಈ ಬೇಡಿಕೆಗಳನ್ನು ಗ್ರಾಮ ಪಂಚಾಯಿತಿ ವತಿಯಿಂದ ಶೀಘ್ರವಾಗಿ ಪರಿಹರಿಸುವಂತೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು. ಸಭೆಯಲ್ಲಿ ಉಪಾಧ್ಯಕ್ಷೆ ಜಲಜಾಕ್ಷಿ, ಸದಸ್ಯರಾದ ಅಜಿತ್ ಕುಮಾರ್, ವಿನಯ್, ಪ್ರಕಾಶ್, ರಾಮದೇವ್, ಸುನಿತಾ, ಸುಮಿ, ಅಶ್ವಿನಿ, ಪುಷ್ಪ, ಪ್ರವೀಣ್ ಇದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಆರ್. ವಿನೋದ್, ಕಾರ್ಯದರ್ಶಿ ಕೆ.ಸಿ. ರವಿ ಇದ್ದರು. ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.