ಶನಿವಾರಸಂತೆ, ಜ. ೩೦: ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಣಸ ಮೈಲಾತ್ ಪುರ ಗ್ರಾಮಕ್ಕೆ ಎಸ್‌ಸಿಪಿ ಯೋಜನೆಯಡಿಯಲ್ಲಿ ರೂ. ೨೫ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರಸ್ತೆ ಅಭಿವೃದ್ಧಿ ಕೆಲಸಕ್ಕೆ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್, ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚಂದ್ರಮೋಹನ್ ಹಾಗೂ ಗ್ರಾಮಸ್ಥರು ಸೇರಿದಂತೆ ಇತರರಿದ್ದರು.