ಕಡಂಗ, ಜ. ೩೦: ಕಡಂಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕರಾದ ಹೇಮಾವತಿ ಎಚ್.ಎ ವಹಿಸಿದ್ದರು.
ಶಿಕ್ಷಕಿ ವಿಮಲಾ ಅವರು ಶಾಲೆಯಲ್ಲಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ, ಇದೀಗ ಚೆಯ್ಯಂಡಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡಿದ್ದು, ಶಿಕ್ಷಕಿ ಜಯಮಾಲಾ ಎಸ್.ಕೆ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿ ಚೆಯ್ಯಂಡಾಣೆ ಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಇವರಿಬ್ಬರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ವಿಮಲಾ ಅವರು ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವ ಪಡೆದಿದೆ ಎಂದರು. ಬಡ ವಿದ್ಯಾರ್ಥಿಗಳ ಸಾರಿಗೆ ಭತ್ಯೆಗಾಗಿ ರೂ.೨,೦೦೦ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಹೇಮಾವತಿ ಹೆಚ್.ಎ ಸ್ವಾಗತಿಸಿ, ವತ್ಸಲ ಅವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕರ ಕಿರುಪರಿಚಯವನ್ನು ಶೋಭಾ ಅವರು ನೆರವೇರಿಸಿದರು.
ಬಬಿತ ಅವರು ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಸೈಬುನ್ನಿಸ ವಂದಿಸಿದರು.