ಕುಶಾಲನಗರ, ಜ. ೩೧: ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಅಂಗವಾಗಿ ೩ನೇ ದಿನವಾದ ಶನಿವಾರ ದೇವಾಲಯದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಕುಶಾಲನಗರ ದೇವಾಲಯಗಳ ಒಕ್ಕೂಟದ ಪ್ರತಿನಿಧಿಗಳು ಫಲ ತಾಂಬೂಲಗಳೊAದಿಗೆ ಆಗಮಿಸಿ ಸಾಮೂಹಿಕಾಗಿ ಪೂಜೆ ಸಲ್ಲಿಸಿದರು. ವೇದಬ್ರಹ್ಮ ಲಕ್ಷಿö್ಮ ಪ್ರಸಾದ್ ಸಾಂತಿಯಾರ್ ಅವರು ಧಾರ್ಮಿಕ ಪ್ರವಚನ ನೀಡಿದರು. ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಡಿ.ಎಚ್. ಅರುಣ್ ಅವರು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಮತ್ತು ಆಡಳಿತ ಮಂಡಳಿ ಸದಸ್ಯರು ಇದ್ದರು.
ಸಂಜೆ ದೇವಾಲಯದ ಮುಂಭಾಗದ ವೇದಿಕೆಯಲ್ಲಿ ವಿದುಷಿ ಕುಮಾರಿ ಸಾಧ್ವಿನಿ ಕೊಪ್ಪ ಮತ್ತು ತಂಡದವರಿAದ ಭಕ್ತಿಗೀತೆಗಳ ಸಂಗೀತ ಕಾರ್ಯಕ್ರಮ ನಡೆಯಿತು.ಶ್ರೀ ವಾಸವಿ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಿತು. ಫೆ. ೧ ರಂದು (ಇಂದು) ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಬೆಳಗ್ಗೆ ೧೦.೩೦ ಕ್ಕೆ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಅವರ ಅಮೃತಹಸ್ತದಿಂದ ಶಿಖರ ಅಭಿಷೇಕ ಕಾರ್ಯಕ್ರಮ ಜರುಗಲಿದೆ. ಸಂಜೆ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ಅಮ್ಮನವರ ಭವ್ಯ ಮೆರವಣಿಗೆ ನಡೆಯಲಿದೆ.