ಮುಳ್ಳೂರು, ಫೆ. ೧: ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ದಿನವನ್ನು ರಾಷ್ಟಿçÃಯ ಹುತಾತ್ಮ ದಿನವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಿ ಪುಣ್ಯ ಸ್ಮರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಪುಷ್ಪ ಸಮರ್ಪಣೆ ಮಾಡಿದರು. ಈ ಸಮಯದಲ್ಲಿ ವಿದ್ಯಾರ್ಥಿಗಳು ರಘುಪತಿ ರಾಘವ ರಾಜರಾಮ್ ಭಕ್ತಿಗೀತೆಯನ್ನು ಹಾಡಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಸಿ.ಎಸ್.ಸತೀಶ್ ಮಾತನಾಡಿ, ಗಾಂಧೀಜಿಯವರು ಅಹಿಂಸೆಯ ಮೂಲಕ ಇಡೀ ಜಗತ್ತಿಗೆ ಸ್ವಾತಂತ್ರö್ಯದ ಸಂದೇಶ ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಾಂಧೀಜಿ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕೆಂದು ಕರೆ ನೀಡಿದರು. ಶಾಲಾ ಸಹ ಶಿಕ್ಷಕ ಜಾನ್ ಪಾವ್ಲ್ ಡಿಸೋಜ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಸಹ ಶಿಕ್ಷಕಿ ಶೀಲಾ ಹಾಗೂ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಡಿದರು.