ಕುಶಾಲನಗರ, ಫೆ. ೧: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್, ಕುಶಾಲನಗರ ತಾಲೂಕು ಘಟಕದ ವತಿಯಿಂದ, ತಾಲೂಕು ಮಟ್ಟದ ಆನ್‌ಲೈನ್ ಜಾನಪದ ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯು ಕುಶಾಲನಗರ ತಾಲೂಕು ವ್ಯಾಪ್ತಿಗೆ ಸೀಮಿತವಾಗಿ ನಡೆಯಲಿದ್ದು, ಭಾಗವಹಿಸುವ ವಿದ್ಯಾರ್ಥಿಗಳು ಎಂಟರಿAದ ಹತ್ತನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು. ಆಸಕ್ತ ವಿದ್ಯಾರ್ಥಿಗಳು, ತಮ್ಮ ಹೆಸರು, ಶಾಲೆ ಮತ್ತು ತರಗತಿಯನ್ನು ಉಲ್ಲೇಖಿಸಿ, ಯಾವುದೇ ಮ್ಯೂಸಿಕ್ ಬಳಸದೆ, ೪ನಿಮಿಷದ ಒಳಗಾಗಿ ಹಾಡಿ, ರೆಕಾರ್ಡ್ ಮಾಡಿದ ವೀಡಿಯೋವನ್ನು ಚೈತನ್ಯ ಸಿ ಮೋಹನ್ ವಾಟ್ಸಾö್ಯಪ್ ಸಂಖ್ಯೆ ೬೩೬೬೩೦೭೨೫೮ಗೆ ತಾ. ೫ ರೊಳಗಾಗಿ ತಲುಪುವಂತೆ ಕಳುಹಿಸಬಹುದು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ಮತ್ತು ಎಲ್ಲರಿಗೂ, ಅಭಿನಂದನಾಪತ್ರ ನೀಡಲಾಗುವುದೆಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷೆ ಚೈತನ್ಯ ಸಿ. ಮೋಹನ್ ತಿಳಿಸಿದ್ದಾರೆ.