ಕೂಡಿಗೆ, ಫೆ. ೧: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡ ತೋಳೂರು ಶೆಟ್ಟಳ್ಳಿ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆಯ ೧೦ನೇ ತರಗತಿಯ ವಿದ್ಯಾರ್ಥಿ ಕೆ. ಎನ್. ಪುಣ್ಯ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಫೆ.೭ ಮತ್ತು ೮ ರಂದು ನಡೆಯಲಿರುವ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಕೊಡಗು ಜಿಲ್ಲೆಯಿಂದ ಆಯ್ಕೆಗೊಂಡಿರುವ ವಿದ್ಯಾರ್ಥಿನಿ ಪುಣ್ಯಳನ್ನು ಶಾಲೆಯಲ್ಲಿ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಗೌರವಿಸಿದರು. ಈ ಸಂದರ್ಭ ಶಾಲಾ ಶಿಕ್ಷಕರು ಹಾಜರಿದ್ದರು. ವಿದ್ಯಾರ್ಥಿನಿ ಪುಣ್ಯ, ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದ ಕೆ.ಎನ್.ನಾಗರಾಜ ಮತ್ತು ರಜನಿ ದಂಪತಿಯ ಪುತ್ರಿ.