ಕೂಡಿಗೆ, ಫೆ ೧೭: ದಂಪತಿ ಬೈಕ್‌ನಲ್ಲಿ ತೆರಳುವ ಸಂದರ್ಭ ಪಿಕಪ್ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಪತ್ನಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೂಡುಮಂಗಳೂರು ಗ್ರಾಮದ ದೊಡ್ಡಮ್ಮ ತಾಯಿ ದೇವಾಲಯ ಮುಂಭಾಗ ಅವಘಡ ಸಂಭವಿಸಿದ್ದು, ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ನಟೇಶ್ (೩೧) ಮೃತಪಟ್ಟಿದ್ದು, ಬೈಕ್ ಹಿಂಬದಿಯಿದ್ದ ನಟೇಶ್ ಪತ್ನಿ ದಿವ್ಯ (೩೦) ಅವರ ಎಡಗಾಲು ಮುರಿದು ಗಂಭೀರ ಗಾಯಗೊಂಡಿದ್ದಾರೆ.

ಬೈಕ್ ತಿರುಗಿಸುತ್ತಿದ್ದ ಸಂದರ್ಭ ಕೂಡಿಗೆ ಕಡೆಯಿಂದ ಕುಶಾಲನಗರಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ಹಿಂಭಾಗದಿAದ ಬಂದು ಡಿಕ್ಕಿಯಾಗಿದೆ. ಪರಿಣಾಮ ಗಂಭೀರಗೊAಡ ಇಬ್ಬರನ್ನು ಕುಶಾಲನಗರ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು, ತಲೆಗೆ ಗಂಭೀರ ಗಾಯಗೊಂಡಿದ್ದ ನಟೇಶ್ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ದಿವ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬAಧ ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಚಾಲಕ ಶಶಿಧರ್ ವಿರುದ್ಧ ಪ್ರಕರಣ ದಾಖಲಾಗಿದೆ.