ಪೊನ್ನಂಪೇಟೆ, ಫೆ. ೨೧: ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವೀರಾಜಪೇಟೆ ತಾಲೂಕು ಸಂಯುಕ್ತ ಆಶ್ರಯದಲ್ಲಿ ನಡೆದ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಪ್ರೌಢಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಗೋಣಿಕೊಪ್ಪದ ಸರ್ವದೈವತಾ ಪ್ರೌಢಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟ, ವಿಭಾಗ ಮಟ್ಟ, ರಾಜ್ಯಮಟ್ಟವನ್ನು ಪ್ರತಿನಿಧಿಸಿದ್ದಾರೆ.
ಇದೀಗ ತಾಲೂಕು ಮಟ್ಟದ ಸಮಗ್ರ ಪ್ರಶಸ್ತಿಯನ್ನು ಸತತವಾಗಿ ಎರಡನೇ ಬಾರಿಗೆ ತಮ್ಮದಾಗಿಸಿಕೊಳ್ಳುವುದರ ಮೂಲಕ ಸರ್ವದೈವತಾ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್ ಗೌಡ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದಿದ್ದಾರೆ.