ವೀರಾಜಪೇಟೆ, ಫೆ. ೨೧: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋರ ಗ್ರಾಮದ ತೋರತಪ್ಪ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ಪೂಜೆ ನೆರವೇರಿತು.

ಮಹಾಪೂಜೆ, ಮಹಾ ಮಂಗಳಾರತಿ ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಕೀತಿಯಂಡ ಮುದ್ದಪ್ಪ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು. ಕೆದಮುಳ್ಳೂರು ಮಹಾದೇವರ ದೇವಾಲಯದ ಮುಖ್ಯ ಅರ್ಚಕರಾದ ರಾಧಕೃಷ್ಣ ಕಣ್ಣರಾಯ ಪೂಜಾ ವಿಧಿವಿಧಾನಗಳನ್ನು ನಡೆಸಿದರು.