ಮಡಿಕೇರಿ, ಫೆ. ೨೧: ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ತಾ. ೨೨ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಮಧ್ಯಾಹ್ನ ೧ ಗಂಟೆಗೆ ಮಡಿಕೇರಿಯಲ್ಲಿ ನಡೆಯಲಿರುವ ದಲಿತರ ಸ್ವಾಭಿಮಾನಿ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎಂ. ಶಿವಣ್ಣ ತಿಳಿಸಿದ್ದಾರೆ.