ಶನಿವಾರಸಂತೆ, ಫೆ. ೨೨: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ದುಂಡಳ್ಳಿ ಗ್ರಾಮ ಪಂಚಾಯಿತಿಯ ಸಂಜೀವಿನಿ ಸಭಾಂಗಣದಲ್ಲಿ ಪೋಷಣ್ ಅಭಿಯಾನ ಯೋಜನೆ ಯ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ, ೬ ತಿಂಗಳ ಮಕ್ಕಳಿಗೆ ಅನ್ನಪ್ರಾಸನ ಹಾಗೂ ೩ ವರ್ಷದ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.

ಹಿರಿಯ ಮಹಿಳಾ ಆರೋಗ್ಯ ಅಧಿಕಾರಿ ಸರಸ್ವತಿ ಮಾತನಾಡಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮತ್ತು ಆರೋಗ್ಯ ಇಲಾಖೆಯ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ನಂದೀಶ್ ಮಾತನಾಡಿ, ಆರೋಗ್ಯ ರಕ್ಷಣೆಯ ಬಗ್ಗೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯಿತಿ ಸಿಬ್ಬಂದಿ, ತಾಯಂದಿರು, ಮಕ್ಕಳು ಹಾಗೂ ಗರ್ಭಿಣಿ ಸ್ತಿçÃಯರು ಹಾಜರಿದ್ದರು.