ಶನಿವಾರಸಂತೆ, ಫೆ. ೨೨: ಸಮೀಪದ ಗುಡುಗಳಲೆ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿತು.

ದೇವಸ್ಥಾನದ ಪ್ರಧಾನ ಅರ್ಚಕ ಶಿವಲಿಂಗಯ್ಯ ನೇತೃತ್ವದಲ್ಲಿ ಶಿವಲಿಂಗಕ್ಕೆ ಅಭಿಷೇಕ, ಬಿಲ್ವಪತ್ರೆ-ಪುಷ್ಪಾರ್ಚನೆ, ಹಣ್ಣುಕಾಯಿ, ನೈವೇದ್ಯ ಸಮರ್ಪಣೆಯಾಗಿ ಮಹಾಮಂಗಳಾರತಿ ನಡೆಯಿತು. ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದ ಸ್ಥಳೀಯ ಹಾಗೂ ಸುತ್ತಮುತ್ತಲಿನ ಭಕ್ತಾದಿಗಳಿಗೆ ತೀರ್ಥ-ಪ್ರಸಾದ ವಿನಿಯೋಗವಾಯಿತು. ನಂತರ ಅನ್ನಸಂತರ್ಪಣೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಶ್ರೀ ಬಸವೇಶ್ವರ ದೇವಾಲಯ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಪೂಜಾ ಕಾರ್ಯಕ್ರಮದಲ್ಲಿ ಹಾಜರಿದ್ದರು.