ವೀರಾಜಪೇಟೆ, ಫೆ. ೨೨: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ವೀರಾಜಪೇಟೆ ತಾಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಂಜುಶ್ರೀ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸೃಜನಶೀಲ ಕಾರ್ಯಕ್ರಮವಾದ ಸ್ಯಾರಿಗೆ ಕುಚ್ ಹಾಕುವುದು, ಸ್ಯಾರಿ ಫೋಲ್ಡಿಂಗ್, ಮದುಮಗಳ ವರ್ಣಾಲಂಕಾರ ಬಗ್ಗೆ ತರಬೇತಿ ಕಾರ್ಯಕ್ರಮ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಗೋಣಿಕೊಪ್ಪ ಕೆನರಾ ಬ್ಯಾಂಕ್ ವ್ಯವಸ್ಥಾಪಕಿ ಶ್ರೀಪ್ರಿಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಸದಸ್ಯೆ ಪುಷ್ಪ, ತರಬೇತುದಾರರಾದ ರಶ್ಮಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಗತಿ ನಿಧಿಯನ್ನು ಪಡೆಯುವುದಲ್ಲದೆ ಅನೇಕ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗಿದೆ. ಜ್ಞಾನವಿಕಾಸ ಕಾರ್ಯಕ್ರಮದಿಂದ ಅನೇಕ ಕಾರ್ಯಕ್ರಮಗಳನ್ನೂ ಅನುಷ್ಠಾನ ಮಾಡಲು ಸಾಧ್ಯವಾಗಿದೆ ಎಂದರು.

ಕೆನರಾ ಬ್ಯಾಂಕ್ ವ್ಯವಸ್ಥಾಪಕಿ ಶ್ರೀಪ್ರಿಯ ಮಾತನಾಡಿ, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಈ ರೀತಿಯ ಕಾರ್ಯಕ್ರಮಗಳು ಅತ್ಯಗತ್ಯ. ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ಸಂಘ ಸಂಸ್ಥೆಗಳಿAದ ದೊರೆಯುವ ತರಬೇತಿಯ ಪ್ರಯೋಜನವನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಉಷಾರಾಣಿ, ಸೇವಾ ಪ್ರತಿನಿಧಿ ವಿಮಲ ಇದ್ದರು.