ಮಡಿಕೇರಿ, ಫೆ. ೨೨: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕಲಾಜಾಥಾ ವಿಶೇಷ ಪ್ರಚಾರಾಂದೋಲನಕ್ಕೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಚಾಲನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಕಂಜರ ಬಾರಿಸುವ ಮೂಲಕ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷಿö್ಮ, ಗೃಹಜ್ಯೋತಿ, ಅನ್ನಭಾಗ್ಯ ಮತ್ತು ಯುವನಿಧಿ ಸೇರಿದಂತೆ ಸರ್ಕಾರದ ಹಲವು ವಿಷಯಗಳ ಕುರಿತು ವಿಶೇಷ ಪ್ರಚಾರಾಂದೋಲನ ವನ್ನು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಕಲಾವಿದ ಈ. ರಾಜು ಮತ್ತು ತಂಡದವರು ‘ಯೋಜನೆ ಬಂತಣ್ಣ. ಗ್ಯಾರಂಟಿ ಯೋಜನೆ ಬಂತಣ್ಣ.. ಮಹಿಳೆಯರ ಪಾಲಿಗೆ ದಾರಿ ದೀಪವಣ್ಣ, ಬಡವರ ಮುಖದಲ್ಲಿ ನಗೆ ಮೂಡಿತಣ್ಣ...’ ಹಾಡು ಹಾಡುವ ಮೂಲಕ ಗಮನ ಸೆಳೆದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಭೀಮರಾಯ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಹೇಮಂತ್ ರಾಜ್, ಇತರರು ಇದ್ದರು.