ಮಡಿಕೇರಿ, ಫೆ. ೨೨: ಬಿರುನಾಣಿಯಲ್ಲಿ ಹಿಂದೂ ಸಂಗಮದ ಅಂಗವಾಗಿ ಅಳವಡಿಸಿದ್ದ ಫ್ಲೆಕ್ಸ್ ಹಾಗೂ ಬಂಟಿAಗ್ಸ್ ಅನ್ನು ತೆರವು ಮಾಡಿರುವುದನ್ನು ಶಾಸಕ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಖಂಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಘಟನೆಗೆ ಸಂಬAಧಿಸಿದAತೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಮಾಡಬಾರದು. ಹಿಂದೂ ಸಮಾವೇಶಕ್ಕೆ ಮುಕ್ತವಾಗಿ ಹಿಂದೂಗಳು ಪಾಲ್ಗೊಳ್ಳುವಂತಗಾಬೇಕು. ಈ ಕೃತ್ಯವನ್ನು ಒಪ್ಪಲು ಸಾಧ್ಯವಿಲ್ಲ. ಈ ಘಟನೆಯಲ್ಲಿ ರಾಜಕೀಯ ಮಾಡುತ್ತಿರುವುದು ಸರಿಯಲ್ಲ. ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.