ಸಿದ್ದಾಪುರ, ಫೆ. ೨೩: ಹಿಂದೂ ಸಂಗಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಿದ್ದರೂ ಮೆರಣಿಗೆಗೆ ಅಡ್ಡಿಪಡಿಸುವ ಯತ್ನ ಪೊಲೀಸ್ ಇಲಾಖೆ ನಡೆಸುತ್ತಿರುವುದು ಸರಿಯಲ್ಲ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಮಹೇಶ್ ಕಡಗದಾಳು ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದಾಪುರದ ಸ್ವರ್ಣ ಮಾಲಾ ಕಲ್ಯಾಣ ಮಂಟಪದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದುತ್ವ ಜೀವನ ಕ್ರಮವಾಗಿದೆ. ಸನಾತನ ಸಂಸ್ಕೃತಿಯನ್ನು ಹೊಂದಿರುವ ಭಾರತ ಹಿಂದೂ ರಾಷ್ಟçವಾಗಿ ಗುರುತಿಸಿಕೊಂಡಿದೆ. ರಾಷ್ಟಿçÃಯ ಸ್ವಯಂಸೇವಕ ಸಂಘದ ಶತಾಬ್ದಿ ಆಚರಣೆಯ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮಗಳಲ್ಲೂ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಂಘಟನೆಯನ್ನು ಹುಟ್ಟು ಹಾಕುವುದು ಸುಲಭ. ಆದರೆ ಸಂಘಟನೆ ನೂರು ವರ್ಷ ಪೂರೈಸಿ ಮುನ್ನಡೆಯುತ್ತಿರುವುದು ಅಸಾಧಾರಣವಾಗಿದೆ. ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದ್ದರೂ ಅದನ್ನೆಲ್ಲ ಮೆಟ್ಟಿನಿಂತು ಸುಭದ್ರವಾಗಿರುವುದು ಸನಾತನ ಧರ್ಮದ ಶಕ್ತಿ ಎಂದರು.
ಸೇವಾ ಭಾರತಿ ಜಿಲ್ಲಾ ಸಂಚಾಲಕ ಟಿ.ಸಿ. ಚಂದ್ರನ್ ಮಾತನಾಡಿ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂಬ ಮೂಲಮಂತ್ರವನ್ನು ಜೀವನದಲ್ಲಿ ಅಳವಡಿಸಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕೆಂದು ಕರೆ ನೀಡಿದರು.
ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಭೂನಾಥ ಸ್ವಾಮೀಜಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ರೂಪೇಶ್, ಡಿಜಿತ್, ಪ್ರಮುಖರಾದ ಸುರೇಶ್ ನೆಲ್ಲಿಕಲ್, ಅನಿಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಸಿದ್ದಾಪುರದ ಶ್ರೀ ಅಯ್ಯಪ್ಪ ದೇವಸ್ಥಾನದಿಂದ ಸಭಾಂಗಣ ತನಕ ಮೆರವಣಿಗೆ ನಡೆಯಿತು. ಕೇಸರಿ ಶಲ್ಯ, ಸಾಂಪ್ರದಾಯಿಕ ಉಡುಗೆ ತೊಟ್ಟ ಮಹಿಳೆಯರು ಕಳಸ ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ಈ ವೇಳೆ ವೀರಾಜಪೇಟೆ ನಾಟ್ಯಾಂಜಲಿ ತಂಡದ ಭಜನೆ ಕುಣಿತ, ಚಂಡೆ ಮೇಳ ಮೆರುಗು ತಂದಿತು.