ಮಡಿಕೇರಿ, ಫೆ. ೨೫: ಕಾನೂನು ಪದವೀಧರರಿಗೆ ಪ್ರೋತ್ಸಾಹ ನೀಡುವ ಯೋಜನೆಗೆ ೨೦೨೫-೨೬ನೇ ಸಾಲಿನಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ತ್ವರಿತವಾಗಿ ತಲುಪಿಸುವ ಉದ್ದೇಶದಿಂದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು, ಅರ್ಹರಿರುವ ನವ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರಿರುವ ನವಕಾನೂನು ಪದವೀಧರರು ಸೂಚನೆಯಗಳನ್ವಯ ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ದಾಖಲೆ ಪ್ರತಿಗಳೊಂದಿಗೆ ಅರ್ಜಿಯನ್ನು (ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು-ಮಡಿಕೇರಿ ಮತ್ತು ೨ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಕೊಡಗು-ಮಡಿಕೇರಿ (ಕಾರ್ಯ ನಿರ್ವಹಣೆ-ವೀರಾಜಪೇಟೆ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಸೋಮವಾರಪೇಟೆ, ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಪೊನ್ನಂಪೇಟೆ ಮತ್ತು ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ, ಕುಶಾಲನಗರ) ಸಂಬAಧಪಟ್ಟ ಹಿರಿಯ ನ್ಯಾಯಾಧೀಶರುಗಳ ಮುಖಾಂತರ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಫೆಬ್ರವರಿ ೧೮ ಪ್ರಾರಂಭದ ದಿನಾಂಕ, ಅರ್ಜಿ ಸಲ್ಲಿಸಲು ಮಾರ್ಚ್ ೧೭ ರ ಸಂಜೆ ೫.೩೦ ಗಂಟೆಗೆ ಕೊನೆಯ ದಿನವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹೊಸಮನಿ ಪುಂಡಲಿಕ ತಿಳಿಸಿದ್ದಾರೆ.