ನಾಪೋಕ್ಲು, ಫೆ. ೨೫: ಅರೆಭಾಷೆಯ ಸೊಗಡು ಹಾಗೂ ಸಾಂಸ್ಕೃತಿಕ ವೈಶಿಷ್ಟö್ಯಗಳನ್ನು ಉಳಿಸಿ ಬೆಳೆಸಲು ವಿಚಾರ ಸಂಕಿರಣ ಅವಶ್ಯಕ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.)-ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಅಭಿಪ್ರಾಯಪಟ್ಟರು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ಅರೆಭಾಷೆ ರಾಷ್ಟಿçÃಯ ವಿಚಾರ ಸಂಕಿರಣ-೨೦೨೬ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಅರೆಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ವಿಚಾರ ಸಂಕಿರಣಗಳು ಅತ್ಯಂತ ಅಗತ್ಯವಾಗಿವೆ. ಭಾಷೆಯ ಹಾಗೂ ಸಾಂಸ್ಕೃತಿಕ ವೈಶಿಷ್ಟö್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಈ ರೀತಿಯ ಕಾರ್ಯಕ್ರಮಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಮಾತನಾಡಿ, ಅರೆಭಾಷೆಯ ಸಂರಕ್ಷಣೆ ಹಾಗೂ ಅದರ ಸಾಹಿತ್ಯಿಕ ಬೆಳವಣಿಗೆಗೆ ನಿರಂತರ ಪ್ರಯತ್ನ ಅಗತ್ಯ. ಅರೆಭಾಷೆಯನ್ನು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಬೆಳೆಸುವಲ್ಲಿ ಅರೆಭಾಷೆ ಅಕಾಡೆಮಿಯ ಪ್ರಯತ್ನಗಳನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎ.ಒ.ಎಲ್.ಇ. (ರಿ.) ಸುಳ್ಯ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಂಚಾಲಕ ಚಂದ್ರಶೇಖರ್ ಪೆರಾಲು, ಸದಸ್ಯರಾದ ಎನ್.ಎ ಜ್ಞಾನೇಶ್, ಚಂದ್ರಾವತಿ ಬಡ್ಡಡ್ಕ, ಪ್ರಕಾಶ್ ಕುಡ್ಪಾಜೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಕೆ.ಟಿ ವಿಶ್ವನಾಥ್, ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ.ಎA ಹಾಗೂ ನೆಹರೂ ಮೆಮೋರಿಯಲ್ ಪಿ.ಯು ಕಾಲೇಜಿನ ಪ್ರಾಂಶುಪಾಲ ಮಿಥಾಲಿ ಪಿ. ರೈ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಭಾಷಾ ವಿಚಾರ ಸಂಕಿರಣ ಉದ್ಘಾಟಿಸಲಾಯಿತು. ವಿಚಾರ ಸಂಕಿರಣದಲ್ಲಿ ವಿವಿಧ ವಿಷಯಗಳ ಕುರಿತು ವಿಚಾರ ಸಂಪನ್ಮೂಲ ವ್ಯಕ್ತಿ, ವಿದ್ವಾಂಸರು ಹಾಗೂ ವಿಶ್ರಾಂತ ಕುಲಪತಿ ಡಾ. ಚಿನ್ನಪ್ಪ ಗೌಡ, ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಧನಂಜಯ ಕುಂಬ್ಳೆ, ಸಾಹಿತಿಗಳು ಮತ್ತು ವಿಶ್ರಾಂತ ಪ್ರಾಧ್ಯಾಪಕ ನರೇಂದ್ರ ರೈ ದೇರ್ಲ, ಹಿರಿಯ ಚಿಂತಕರು ಹಾಗೂ ಸಾಹಿತಿಗಳಾದ ರಾಧಾಕೃಷ್ಣ ಕೆ.ಇ, ಕೆ.ಆರ್ ಗಂಗಾಧರ್, ಡಾ. ಪುರುಷೋತ್ತಮ ಕರಂಗಲ್ಲು, ಪಟ್ಟಡ ಶಿವಕುಮಾರ್, ದೊಡ್ಡಣ್ಣ ಬರಮೇಲು, ಜಯಪ್ರಕಾಶ್ ಕುಕ್ಕೆಟ್ಟಿ, ಡಾ. ಕರುಣಾಕರ ನಿಡಿಂಜಿ, ಡಾ. ದಯಾನಂದ ಕೂಡಕಂಡಿ ಅವರುಗಳು ವಿವಿಧ ವಿಚಾರಗಳ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರು, ಸಿಬ್ಬಂದಿಗಳು, ಸಾಹಿತಿಗಳು, ವಿಚಾರ ಸಂಪನ್ಮೂಲ ವ್ಯಕ್ತಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಚಂದ್ರಶೇಖರ್ ಪೆರಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಅನುರಾಧ ಕುರುಂಜಿ ನಿರೂಪಿಸಿದರು. ಡಾ. ರುದ್ರ ಕುಮಾರ್ ಎಂ.ಎA ವಂದಿಸಿದರು.