ಮಡಿಕೇರಿ, ಫೆ. ೨೬: ಸೈಬರ್ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮಾ. ೧ ರಂದು ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಾಗೃತಿ ಓಟ ಆಯೋಜಿಸಲಾಗಿದೆ.
ಬೆಳಿಗ್ಗೆ ೬.೩೦ಕ್ಕೆ ಮಡಿಕೇರಿಯ ಸುದರ್ಶನ ವೃತ್ತದಿಂದ ಜಿಲ್ಲಾ ಪೊಲೀಸ್ ಕವಾಯತ್ ಮೈದಾನ ತನಕ ಜಾಗೃತಿ ಓಟ ನಡೆಯಲಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಮನವಿ ಮಾಡಿದ್ದಾರೆ.