ಮಡಿಕೇರಿ, ಫೆ. ೨೬: ೩೬ ವರ್ಷ ಬಿಳಿಗೇರಿ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದೇವಕಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಮೇಕೇರಿ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಪೋಷಣ್ ಅಭಿಯಾನ ಯೋಜನೆಯಡಿ ಸಮುದಾಯ ಆಧಾರಿತ ಚಟುವಟಿಕೆಯಾದ ಸೀಮಂತ ಕಾರ್ಯಕ್ರಮವನ್ನು ಭವ್ಯ ಅವರಿಗೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಸನ್ನ ಕುಮಾರ್ ಪಾಲ್ಗೊಂಡು ಪೋಷಣ್ ಅಭಿಯಾನ ಯೋಜನೆಯಡಿ ಸೀಮಂತ ಕಾರ್ಯಕ್ರಮದ ಪ್ರಾಮುಖ್ಯತೆಯನ್ನು ವಿವರಿಸಿದರು.
ಪ್ರಬಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಮಾತನಾಡಿ, ಬಹಳ ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಮತ್ತು ಇತ್ತೀಚೆಗೆ ರೆಡ್ಕ್ರಾಸ್ ಸಂಸ್ಥೆಯಿAದ ಗೌರವ ಸನ್ಮಾನಕ್ಕೆ ಒಳಗಾಗಿದ್ದ ಬಿಳಿಗೇರಿ ಅಂಗನವಾಡಿ ಕಾರ್ಯಕರ್ತೆ ದೇವಕಿ ಅವರ ಸೇವೆ ಬಗ್ಗೆ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಮೇಕೇರಿ ಗ್ರಾಮಸ್ಥರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಜರಿದ್ದರು.