ಚೆಯ್ಯಂಡಾಣೆ, ಫೆ. ೨೫: ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧನೆ ಮಾಡಿದ ಸಾಧಕರನ್ನು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾ.ಪಂ. ಸಭಾಂಗಣದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ವಹಿಸಿದ್ದರು.
ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಪಟ್ಟಚೆರುವಂಡ ಗಗನ್ ಮೇದಪ್ಪ, ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪಡೆದ ಬಿ.ಎ ವನಜಾ, ಸಮುದಾಯದೊಂದಿಗೆ ಉತ್ತಮ ಹೊಂದಾಣಿಕೆ ಪ್ರಶಸ್ತಿ ಪಡೆದ ಟಿ.ಕೆ ಕವಿತಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷಾ ಅಧಿಕಾರಿ ಕನಕಾವತಿ ಅವರುಗಳÀನ್ನು ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಬಿ.ಎ ವನಜಾ, ಕವಿತಾ ಹಾಗೂ ಕನಕಾವತಿ ಅವರುಗಳು ಮಾತನಾಡಿ, ತಮ್ಮ ಸೇವಾ ಅವಧಿಯಲ್ಲಿ ನಡೆದ ಹಳೆಯ ನೆನಪುಗಳನ್ನು ಮೆಲಕು ಹಾಕಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಮಾಜಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಸದಸ್ಯರಾದ ಬೇಪಡಿಯಂಡ ವಿಲಿನ್, ಮಮ್ಮದ್, ಬಿ.ಎಸ್ ಪುಷ್ಪ, ರಾಣಿ ಗಣಪತಿ, ವಾಣಿ, ಮಂಜುಳಾ, ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.