ಪೊನ್ನಂಪೇಟೆ, ಫೆ. ೨೪: ಪೊನ್ನಂಪೇಟೆ ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ೧೪ನೇ ವರ್ಷದ ವಾರ್ಷಿಕ ಮಹಾಸಭೆ ಇತ್ತೀಚೆಗೆ ಇಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಸ್ಥಾಪಕ ಅಧ್ಯಕ್ಷ ಅಜ್ಜಿಕುಟ್ಟೀರ ಪೊನ್ನಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ೭,೧೦ ಮತ್ತು ೧೨ ನೇ ತರಗತಿಯಲ್ಲಿ ಶೇ. ೭೦ ಕ್ಕಿಂತ ಅಧಿಕ ಅಂಕಗಳಿಸಿ ಉತ್ತೀರ್ಣರಾದ ಸಂಘದ ಸದಸ್ಯರ ಮಕ್ಕಳಿಗೆ ಸಂಘದ ವತಿಯಿಂದ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭ ಸಂಘದ ಅಧ್ಯಕ್ಷ ಅಜ್ಜಿಕುಟ್ಟೀರ ಪೊನ್ನಪ್ಪ ಮಾತನಾಡಿ ಆಟೋ ಚಾಲಕರು ಸಮಾಜದ ಕಣ್ಣಿದ್ದಂತೆ. ಪೊನ್ನಂಪೇಟೆ ಆಟೋ ಚಾಲಕರ ಸಂಘದಿAದ ಈ ಭಾಗದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದು ಮುಂದೆಯೂ ಹೀಗೆಯೇ ಮುಂದುವರಿಯಲಿ ಎಂದು ಆಶಿಸಿದರು.

ಸಂಘದ ಉಪಾಧ್ಯಕ್ಷ ಚಮ್ಮಟ್ಟಿರ ಶಾಂತ ಪೊನ್ನಪ್ಪ ಹಾಗೂ ಸದಸ್ಯರು ಹಾಜರಿದ್ದರು. ಕಾರ್ಯದರ್ಶಿ ಸುರೇಶ್ ಸ್ವಾಗತಿಸಿ, ಖಜಾಂಚಿ ಮಂಜು ವಂದಿಸಿದರು.