ಮಡಿಕೇರಿ, ಫೆ. ೨೬: ಜಿಲ್ಲಾಡಳಿತ, ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಹಯೋಗದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಹಾಗೂ ವಿವಿಧ ಇಲಾಖೆಯ ಭಾಗೀಧಾರರಿಗೆ ಮಕ್ಕಳ ಹಕ್ಕುಗಳನ್ನು ಅನುಷ್ಠಾನಗೊಳಿಸಲು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಮಕ್ಕಳ ಹಕ್ಕುಗಳಿಗೆ ಸಂಬAಧಿಸಿದ ವಿವಿಧ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರ ತಾ.೨೭ ರಂದು ಬೆಳಿÀಗ್ಗೆ ೧೦.೩೦ ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಆರ್.ಎನ್. ಬಿಂದುಮಣಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಎನ್‌ಸಿಪಿಸಿಆರ್ ಸಲಹೆಗಾರರಾದ ಶುಭಿ ಶರ್ಮಾ ಇತರರು ಪಾಲ್ಗೊಳ್ಳಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ. ಕೆ. ರಾಘವೇಂದ್ರ ಭಟ್ ಇತರರು ಭಾಗವಹಿಸಲಿದ್ದಾರೆ.