ಮಡಿಕೇರಿ, ಫೆ. ೨೬: ತಾ. ೨೮ ರಿಂದ ಮಾರ್ಚ್ ೧೭ ರವರೆಗೆ ಮಡಿಕೇರಿ, ನಾಪೋಕ್ಲು, ಪೊನ್ನಂಪೇಟೆ, ಸೋಮವಾರಪೇಟೆ, ವೀರಾಜಪೇಟೆ, ಸುಂಟಿಕೊಪ್ಪ, ಕುಶಾಲನಗರ, ಕೂಡಿಗೆ, ನೆಲ್ಲಿಹುದಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು, ಚೇರಂಬಾಣೆ ಅರುಣ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿಪೂರ್ವ ಕಾಲೇಜು, ಶನಿವಾರಸಂತೆ ಪದವಿಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿಪೂರ್ವ ಕಾಲೇಜು, ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜು, ವೀರಾಜಪೇಟೆ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜು, ಗೋಣಿಕೊಪ್ಪ ಕಾವೇರಿ ಪದವಿಪೂರ್ವ ಕಾಲೇಜು, ಮಡಿಕೇರಿ ಸಂತ ಮೈಕಲರ ಪದವಿಪೂರ್ವ ಕಾಲೇಜು ಹಾಗೂ ಗೋಣಿಕೊಪ್ಪ ವಿದ್ಯಾನಿಕೇತನ ಪದವಿಪೂರ್ವ ಕಾಲೇಜು ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವತಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-೧ನ್ನು ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್‌ಗಳನ್ನು ಮುಚ್ಚಿಸತಕ್ಕದೆಂದು ಸಹ ತಿಳಿಸಿದ್ದಾರೆ.