ಮಡಿಕೇರಿ, ಫೆ. ೨೬: ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಹಯೋಗದಲ್ಲಿ ಸಂವಿಧಾನ ಮತ್ತು ಪತ್ರಿಕೋದ್ಯಮ ಬಗ್ಗೆ ವಿಚಾರ ಸಂಕಿರಣ, ಫ್ಯಾಕ್ಟ್ ಚೆಕ್ ಮತ್ತು ನ್ಯೂಸ್ ರೂಂನಲ್ಲಿ ಎಐ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಕುರಿತು ತರಬೇತಿ ಕಾರ್ಯಕ್ರಮ ತಾ.೨೮ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ.
ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆÀ ಆಯೇಷಾ ಖಾನಂ, ಸಂಸದರಾದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎ. ಪೊನ್ನಪ್ಪ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ ಅಧ್ಯಕ್ಷರಾದ ಪಿ. ಕಲಾವತಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಭಾಗವಹಿಸಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಎಚ್.ಟಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ ಉಪಸ್ಥಿತರಿರಲಿದ್ದಾರೆ.
ಫ್ಯಾಕ್ಟ್ ಚೆಕ್ ಹಾಗೂ ಬದಲಾಗುತ್ತಿರುವ ಪತ್ರಿಕೋದ್ಯಮದಲ್ಲಿ ಭಾಷೆ ಎಂಬ ವಿಷಯದ ಕುರಿತು ಹಿರಿಯ ಪತ್ರಕರ್ತ ಸಮೀವುಲ್ಲಾ, ಸುಧಾ ವಾರಪತ್ರಿಕೆಯ ಸಂಪಾದಕಿ ರಶ್ಮಿ ಎಸ್ ಹಾಗೂ ಫ್ಯಾಕ್ಟ್ ಚೆಕ್ ಮತ್ತು ನ್ಯೂಸ್ ರೂಂನಲ್ಲಿ ಎಐ ಎಂಬ ವಿಷಯದ ಕುರಿತು ಎಐ ಪರಿಣಿತ ಐಐಟಿ ರಾಹುಲ್ ಗುಂಡಾಲ ಅವರು ವಿಚಾರ ಮಂಡಿಸಲಿದ್ದಾರೆ.
ಸಂಜೆ ೪.೩೦ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೊಡಗು ಜಿ.ಪಂ.ಆಡಳಿತಾಧಿಕಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಎನ್.ಎಸ್.ಮಹೇಶ್ ಇತರರು ಪಾಲ್ಗೊಳ್ಳಲಿದ್ದಾರೆ.