ಕಣಿವೆ, ಫೆ. ೨೭: ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪ್ರಸಾದ್ ಅವರು ಗುಡ್ಡೆಹೊಸೂರು ಗ್ರಾಮಕ್ಕೆ ಭೇಟಿ ನೀಡಿದರು.

ಈ ಸಂದರ್ಭ ಬಸವನಹಳ್ಳಿ ಗ್ರಾಮದ ಕುಡಿಯುವ ನೀರಿನ ಸರಬರಾಜು ಘಟಕ ಹಾಗೂ ಫಿಲ್ಟರ್ ಯೂನಿಟ್‌ಗಳನ್ನು ಪರಿಶೀಲಿಸಿದರು. ನೀರು ನಿರ್ವಾಹಕರು ನಿಯಮಿತವಾಗಿ ನೀರಿನ ಗುಣಮಟ್ಟವನ್ನು ಪರಿಶೀಲನೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು

ನಂತರ ಬಸವನಹಳ್ಳಿಯ ಆಶ್ರಮ ಶಾಲೆಗೆ ಭೇಟಿ ನೀಡಿ ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಶಾಲೆಯಲ್ಲಿ ಮಕ್ಕಳಿಗೆ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳನ್ನೂ ಪರಿಶೀಲಿಸಿದರು. ಬಸವನಹಳ್ಳಿಯಲ್ಲಿ ನೂತನವಾಗಿ ನಿರ್ಮಾಣ ವಾಗುತ್ತಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸಂದರ್ಭ ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಕುಶಾಲನಗರ ತಹಶೀಲ್ದಾರ್ ಕಿರಣ್ ಗೌರಯ್ಯ, ಗ್ರಾಮೀಣ ಕುಡಿಯುವ ನೀರಿನ ಸಹಾಯಕ ಕಾರ್ಯ ಪಾಲಕ ಅಭಿಯಂತರ ವೀರೇಂದ್ರ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಇದ್ದರು.