ಮಡಿಕೇರಿ, ಫೆ. ೨೭: ೩೩/೧೧ ಕೆ.ವಿ ಮೂರ್ನಾಡು ವಿದ್ಯುತ್ ವಿತರಣಾ ಉಪ ಕೇಂದ್ರದಿAದ ಹೊರಹೊಮ್ಮುವ ಎಫ್-೨ ನಾಪೋಕ್ಲು ಹಾಗೂ ಎಫ್-೫ ಹೊದ್ದೂರು ಫೀಡರ್‌ನಲ್ಲಿ ಮಾರ್ಚ್ ೧ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.