ಮಡಿಕೇರಿ, ಫೆ. ೨೭: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ವತಿಯಿಂದ ಶಾಸಕರ ಅನುದಾನದಲ್ಲಿ ನವೀಕರಣಗೊಂಡ ಸಭಾಂಗಣವನ್ನು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು.
ಇದೇ ಸಂದರ್ಭ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್, ಗೈಡ್ಸ್ ಭವನದಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆ, ವಿಶ್ವ ಚಿಂತನಾ, ವಿಶ್ವ ಭ್ರಾತೃತ್ವ ದಿನಾಚರಣೆ ಹಾಗೂ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಸಂಸ್ಥೆಯ ಅಭಿವೃದ್ಧಿಗೆ ಅಗತ್ಯ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.
ಈ ಸಂಸ್ಥೆಯು ಶಿಸ್ತು ಮತ್ತು ಪ್ರಾಮಾಣಿಕತೆಗೆ ಮಾದರಿಯಾದ ಸಂಸ್ಥೆಯಾಗಿದೆ. ಸೇವಾ ಮನೋಭಾವನೆ ಇದರ ಆದರ್ಶವಾಗಿದ್ದು, ೨೦೧೮ ರಲ್ಲಿ ನಡೆದ ಪ್ರಾಕೃತಿಕ ವಿಕೋಪದ ಸಂದರ್ಭ ಕೂಡ ಈ ಸಂಸ್ಥೆಯು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದೆ. ಸೇವಾ ಮನೋಭಾವ ಹೊಂದಿರುವ ಈ ಸಂಸ್ಥೆಯ ಬಗ್ಗೆ ನನಗೆ ಬಹಳ ಹೆಮ್ಮೆ ಇದೆ ಎಂದರು.
ಜಿಲ್ಲಾ ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಜಿಲ್ಲಾ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೇಲೆ ತುಂಬಾ ಅಭಿಮಾನವಿದೆ, ನಾನು ಕೂಡ ಸ್ಕೌಟ್ ಆಗಿದ್ದೆ, ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರವನ್ನು ಪಡೆಯುತ್ತಿರುವ ತಾವು ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಪ್ರಶಸ್ತಿ ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಂಯೋಜಕ ಕೃಷ್ಣಪ್ಪ ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ವಿದ್ಯಾರ್ಥಿಗಳಲ್ಲಿ ಪ್ರಮಾಣಿಕತೆ ಬೆಳೆಸುತ್ತದೆ. ವಿದ್ಯಾರ್ಥಿಗಳು ಒಳ್ಳೆಯ ಗುಣನಡತೆಯನ್ನು ಬೆಳೆಸಿಕೊಂಡು ಉತ್ತಮ ನಾಗರಿಕರಾಗಿ ಬೆಳೆಯಲು ಈ ಸಂಸ್ಥೆ ದಾರಿದೀಪವಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು ಅವರು ಇಂಗ್ಲೆAಡ್‌ನಲ್ಲಿ ೧೯೦೭ರಲ್ಲಿ ರಾಬರ್ಟ್ ಬೇಡನ್ ಪೊವೆಲ್ ಅವರಿಂದ ೨೦ ಮಕ್ಕಳೊಂದಿಗೆ ಪ್ರಾಯೋಗಿಕವಾಗಿ ಪ್ರಾರಂಭಗೊAಡ ಸ್ಕೌಟ್ಸ್ ಸಂಸ್ಥೆಯು ಇಂದು ೨೧೬ ದೇಶಗಳಲ್ಲಿ ಹೆಮ್ಮರವಾಗಿ ಬೆಳೆದಿದೆ. ಫೆ. ೨೨ ರಾಬರ್ಟ್ ಬೇಡನ್ ಪೊವೆಲ್ ಅವರ ಜನ್ಮದಿನವಾಗಿದ್ದು, ಅವರ ಮಾರ್ಗದರ್ಶನ ಇಂದಿಗೂ ಮಾದರಿಯಾಗಿದೆ. ಸಂಸ್ಥೆಯ ಅಭಿವೃದ್ಧಿ ಕಾರ್ಯಗಳಿಗೆ ೫ ಲಕ್ಷ ರೂಪಾಯಿಗಳನ್ನು ಒದಗಿಸುವಂತೆ ಶಾಸಕರಲ್ಲಿ ಮನವಿ ಮಾಡಿದರು.
ಜಿಲ್ಲಾ ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸಿಕ್ವೇರಾ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆ ನಡೆದು ಬಂದ ಹಾದಿಯನ್ನು ವಿವರಿಸಿದರು. ಶಾಸಕ ಡಾ.ಮಂತರ್ ಗೌಡ ಅವರನ್ನು ಕೆ.ಟಿ. ಬೇಬಿ ಮ್ಯಾಥ್ಯು ಅವರು ಸನ್ಮಾನಿಸಿ, ಗೌರವಿಸಿದರು. ಸುಮಾರು ೨೮ ವರ್ಷಗಳ ಕಾಲ ಗೈಡ್ಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದ ಅಮ್ಮತ್ತಿಯ ಗುಡ್ ಶಫರ್ಡ್ ಶಾಲೆಯ ನಿವೃತ್ತ ಶಿಕ್ಷಕಿ ಮೇರಿ ಅವರನ್ನು ಕೂಡ ಇದೇ ಸಂದರ್ಭ ಸನ್ಮಾನಿಸಲಾಯಿತು.
ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಭಾ ಕಾರ್ಯಕ್ರಮ ಆರಂಭಗೊAಡಿತು. ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪಕರಾದ ರಾಬರ್ಟ್ ಬೇಡನ್ ಪೊವೆಲ್ ಹಾಗೂ ಸೈಂಟ್ ಆಲೀವ್ ಕೇರ್ ಸೋಮ್ಸ್ ಅವರ ಭಾವಚಿತ್ರಕ್ಕೆ ನೆರೆದಿದ್ದವರು ಹಾಗೂ ವಿದ್ಯಾರ್ಥಿಗಳು ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿದರು.
ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಬಿ.ವೈ., ಪ್ರಾಧಿಕಾರದ ಸದಸ್ಯ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ., ಜಿಲ್ಲಾ ಗೈಡ್ ಆಯುಕ್ತರಾದ ರಾಣಿ ಮಾಚಯ್ಯ, ಜಿಲ್ಲಾ ಗೈಡ್ ತರಬೇತಿ ಆಯುಕ್ತರಾದ ಮೈಥಿಲಿ ರಾವ್, ಗೈಡ್ಸ್ ಸಹಾಯಕ ಆಯುಕ್ತರಾದ ಸುಲೋಚನ ಸಿ.ಎಂ., ಸಹಾಯಕ ಸ್ಕೌಟ್ಸ್ ಆಯುಕ್ತ ಕೆ.ಬಿ. ಗಣೇಶ್, ವೀರಾಜಪೇಟೆ ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಜಾಜಿ, ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ, ಜಿಲ್ಲಾ ಸಂಘಟಕರಾದ ಯು.ಸಿ. ದಮಯಂತಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಕ್ಯಾಪ್ಟನ್‌ಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.
ಜಿಲ್ಲಾ ಕಾರ್ಯದರ್ಶಿ ಎಂ.ಎA. ವಸಂತಿ ಸ್ವಾಗತಿಸಿ, ವಂದಿಸಿದರು. ಜಿಲ್ಲಾ ತರಬೇತಿ ಆಯುಕ್ತ ಕೆ.ಯು. ರಂಜಿತ್ ನಿರೂಪಿಸಿದರು.