ಮಡಿಕೇರಿ, ಫೆ. ೨೭: ಶ್ರೀ ಯೋಗಿ ನಾರೇಯಣ ಬಲಿಜ ಸಂಘ ಕೊಡಗು ಜಿಲ್ಲಾ ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀಯೋಗಿ ನಾರೇಯಣ ಯತೀಂದ್ರರ ಜಯಂತಿ (ಕೈವಾರ ತಾತಯ್ಯ ಜಯಂತಿ) ಕಾರ್ಯಕ್ರಮವು ಮಾರ್ಚ್ ೩ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘದ ಜಿಲ್ಲಾಧ್ಯಕ್ಷರಾದ ಟಿ.ಜಿ ಗಣೇಶ್ ನಾಯ್ಡು ಅವರು, ಯೋಗಿ ನಾರೇಯಣರ ೩೦೦ನೇ ಜಯಂತಿ ಅಂಗವಾಗಿ ರಾಜ್ಯಾದ್ಯಂತ ಮಾರ್ಚ್ ೩ ರಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೂ ಕೂಡ ಭಾಗವಹಿಸಲಿದ್ದಾರೆ. ಕೊಡಗು ಜಿಲ್ಲೆಯಲ್ಲಿಯೂ ಕೂಡ ಜಿಲ್ಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಹಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಟಿ.ಪಿ ರಮೇಶ್ ಅವರು ಉಪನ್ಯಾಸ ನೀಡಲಿದ್ದಾರೆ. ಸಂಸದರೂ ಹಾಗೂ ಶಾಸಕದ್ವಯರು ಭಾಗವಹಿಸಲಿದ್ದಾರೆ ಎಂಬುದಾಗಿ ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಆರ್ ಸುಬ್ರಮಣಿ, ಸಹ ಕಾರ್ಯದರ್ಶಿ ಯಶ್ವಂತ್ ಕುಮಾರ್ ಹಾಗೂ ನಿರ್ದೇಶಕರಾದ ಟಿ.ಎಚ್ ಸುದೀಂದ್ರ ಹಾಜರಿದ್ದರು.