ವೀರಾಜಪೇಟೆ, ಮಾ. ೧: ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪಿ.ವಿ. ಜಾನ್ಸನ್ ಅಧ್ಯಕ್ಷತೆಯಲ್ಲಿ ಜರುಗಿತು.

ವೀರಾಜಪೇಟೆಯ ಶಾಸಕರ ಕಚೇರಿಯಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾನ್ಸನ್, ತಾಲೂಕಿನಲ್ಲಿ ಕಡುಬಡವರ ಬಿಪಿಎಲ್ ಕಾರ್ಡ್ಗಳೂ ರದ್ದಾಗಿವೆ. ಕೆಲವರಿಗೆ ತಾಂತ್ರಿಕ ದೋಷಗಳಿಂದ ಗೃಹಲಕ್ಷಿö್ಮ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತಿಲ್ಲ. ಕೆಲವೆಡೆ ಕೆಎಸ್‌ಆರ್‌ಟಿಸಿ ಬಸ್‌ಗಳು ನಿಲುಗಡೆ ನೀಡುತ್ತಿಲ್ಲವೆಂಬ ದೂರುಗಳಿವೆ. ಆದ್ದರಿಂದ ಪ್ರತಿ ಹೋಬಳಿವಾರು ಬಿಪಿಎಲ್ ಕಾರ್ಡ್ ರದ್ದಾಗಿರುವವರು ಹಾಗೂ ಗೃಹಲಕ್ಷಿö್ಮ ಹಣ ಬರುತ್ತಿಲ್ಲವೆನ್ನುವಂತಹವರನ್ನು ಪಟ್ಟಿ ಮಾಡಿ ಅವರ ದಾಖಲೆಗಳನ್ನು ಪಡೆದು ಸತ್ಯಾಸತ್ಯತೆಯ ವರದಿಯನ್ನು ರಾಜ್ಯ ಸಮಿತಿಗೆ ಕಳುಹಿಸುವ ಕೆಲಸ ಮಾಡಲಾಗುವುದು. ಕೆಲವೆಡೆ ಬಸ್‌ಗಳು ನಿಲುಗಡೆ ನೀಡುತ್ತಿಲ್ಲವೆನ್ನುವ ದೂರುಗಳಿದ್ದು ಅವುಗಳನ್ನು ಬಗೆಹರಿಸಲಾಗುವುದು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬAಧಿಸಿದAತೆ ತಾಲೂಕಿನಲ್ಲಿ ಹೋಬಳಿವಾರು ಕುಂದುಕೊರತೆ ಸಭೆಯನ್ನು ನಡೆಸುವ ಮೂಲಕ ಸಮಸ್ಯೆಗಳಿದ್ದಲ್ಲಿ ಬಗೆಹರಿಸುವ ಕೆಲಸ ಮಾಡಲಾಗುವುದು. ಪಡಿತರ ಚೀಟಿ ವಿತರಣೆಯಲ್ಲಿ ಸಾಕಷ್ಟು ಗೊಂದಲವಿದೆ. ಬಿಪಿಎಲ್ ಪಡಿತರ ಚೀಟಿದಾರರನ್ನು ಎಪಿಎಲ್‌ಗೆ ವರ್ಗಾಯಿಸಿದ್ದು, ಇದನ್ನು ಕೂಡಲೇ ಪರಿಶೀಲಿಸಬೇಕು. ಬಡವರಿಗೆ ಅನ್ಯಾಯವಾಗಬಾರದು. ಬಿಪಿಎಲ್‌ನಿಂದ ಎಪಿಎಲ್ ಆಗಿದ್ದಲ್ಲಿ ಯಾವುದೇ ಕುಟುಂಬ ತಹಶೀಲ್ದಾರ್ ಕಚೇರಿಯ ಆಹಾರ ಶಾಖೆಗೆ ಮನವಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯುವಂತಾಗಬೇಕು. ಅರ್ಹರೆಲ್ಲರಿಗೂ ಬಿಪಿಎಲ್ ಪಡಿತರ ಚೀಟಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ತಹಶೀಲ್ದಾರ್ ಕಚೇರಿಗೆ ಮನವಿ ಸಲ್ಲಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಹಾರ ನಿರೀಕ್ಷಕರಾದ ಸೀನಾ ಕುಮಾರಿ ಇತ್ತೀಚೆಗೆ ಬಿಪಿಎಲ್‌ನಿಂದ ಎಪಿಎಲ್‌ಗೆ ಬದಲಾಗಿದ್ದಲ್ಲಿ, ಸರಿಪಡಿಸಿಕೊಳ್ಳಲು ಅವಕಾಶವಿದೆ. ಅರ್ಹರಿಗೆ ಪಡಿತರ ಚೀಟಿ ಒದಗಿಸುವ ಸಲುವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಸದಸ್ಯರಾದ ಹರೀಶ್, ಮಹದೇವ, ವಿನಿತ ಮಾತನಾಡಿದರು. ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ ಹಾಗೂ ಯುವನಿಧಿಗೆ ಸಂಬAಧಿಸಿದAತೆ ಸಭೆಯಲ್ಲಿ ಚರ್ಚಿಸಲಾಯಿತು.

ತಾಲೂಕಿನ ವ್ಯಾಪ್ತಿಯಲ್ಲಿ ಗೃಹಲಕ್ಷಿö್ಮ ಯೋಜನೆ ಕುರಿತು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರೇಣುಕಾ ಹೊಸಮನಿ, ಗೃಹಲಕ್ಷಿö್ಮ ಯೋಜನೆಯ ತಂಗಮ್ಮ ಮಾಹಿತಿ ನೀಡಿ, ಗೃಹಲಕ್ಷಿö್ಮ ಯೋಜನೆಯಡಿ ಫಲಾನುಭವಿಗಳು ಹೆಸರು ನೋಂದಾಯಿಸಿಕೊAಡಿದ್ದು ತೆರಿಗೆದಾರರು, ಪಿಎಂ ಕಿಸಾನ್ ಕಾರ್ಡ್ ಹೊಂದಿರುವವರ ಆದಾಯ ಪ್ರಮಾಣಪತ್ರಗಳನ್ನು ಪರಿಶೀಲಿಸಿ ಬದಲಾವಣೆ ಮಾಡಲಾಗುತ್ತಿದ್ದು, ಕೆಲವೊಂದು ತಪ್ಪಾಗಿ ಪಟ್ಟಿಯಲ್ಲಿ ಬಡವರಿಗೂ ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸಲು ಬಂದಿದ್ದು ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಸಭೆಯಲ್ಲಿ ಕೋರಲಾಯಿತು. ಸಭೆಯಲ್ಲಿ ಶಕ್ತಿ ಯೋಜನೆ, ಗೃಹಜ್ಯೋತಿ, ಯುವ ನಿಧಿ ಯೋಜನೆಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮೋಹನ್, ಗ್ಯಾರಂಟಿ ಯೋಜನೆಯ ಸದಸ್ಯರುಗಳಾದ ಆಲಿ, ವಿನಿತ ಕಾವೇರಮ್ಮ, ಇಂದಿರಾ ಜೆ.ಆರ್. ನಿಶಿತಾ ಕೆ.ಎ. ಎಂ.ಪಿ ಗಣೇಶ್, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.