*ಗೋಣಿಕೊಪ್ಪ, ಮಾ. ೧: ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ.
೨೦೨೫-೨೬ನೇ ಸಾಲಿಗೆ ಸಂಬAಧಿಸಿದAತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಾಲೆ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಕಾರ್ಯವೈ ಖರಿಯನ್ನು ಪರಿಗಣಿಸಿ ನೀಡುವ ಅತ್ಯುತ್ತಮ ಜಿಲ್ಲಾ ಮಟ್ಟದ ಪ್ರಶಸ್ತಿ ಇದಾಗಿದೆ.
ಶಾಲೆಯು ೧೯೧೬ರಲ್ಲಿ ಪ್ರಾರಂಭವಾದರೂ ೧೯೨೭ರಲ್ಲಿ ಸರಕಾರದ ಮಾನ್ಯತೆ ದೊರಕಿ ನಡೆಯುತ್ತಾ ಸಾಗಿದೆ. ಕಳೆದ ಅವಧಿಯಲ್ಲಿ ಶತಮಾನೋತ್ಸವವನ್ನು ಆಚರಿಸಿಕೊಂಡಿದೆ. ಶಾಲೆ ಪ್ರಾರಂಭದಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ದಾಖಲೆ ಹೊಂದಿತ್ತು. ಪ್ರಸ್ತುತ ಒಂದರಿAದ ಎಂಟನೇ ತರಗತಿವರೆಗೆ ೩೨೪ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಪ್ರಶಸ್ತಿ ಸಂಭ್ರಮವನ್ನು ಹಂಚಿಕೊAಡ ಎಸ್‌ಡಿಎಂಸಿ ಅಧ್ಯಕ್ಷ ಜಗದೀಶ್ ಜೋಡುಬೀಟಿ ಮಾತನಾಡಿ, ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ, ಹಿರಿಯ ವಿದ್ಯಾರ್ಥಿಗಳ ಸಂಘ ಮತ್ತು ಸ್ಥಳೀಯ ದಾನಿಗಳ ಸಾಕಾರದೊಂದಿಗೆ ಶಾಲೆಯ ಸ್ವರೂಪವನ್ನೇ ಬದಲಾಯಿಸಿ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲಾಗಿದೆ. ಶಾಲೆಯ ವಾತಾವರಣದಲ್ಲಿ ಮತ್ತಷ್ಟು ಸೃಜನಶೀಲತೆಯನ್ನು ತರುವ ಪ್ರಯತ್ನಕ್ಕೆ ಸಮಿತಿ ಕಾರ್ಯೋನ್ಮುಕವಾಗಿದೆ ಎಂದು ತಿಳಿಸಿದರು.
ಶಾಲೆಯ ಮುಖ್ಯ ಶಿಕ್ಷಕ ಹೆಚ್.ಕೆ ಕುಮಾರ್ ಮಾತನಾಡಿ, ಶಾಲೆಯಲ್ಲಿನ ಸಮರ್ಪಕ ನಿರ್ವಹಣೆಯ ಹಿನ್ನೆಲೆಯ ಜೊತೆಗೆ ಸ್ಥಳೀಯ ದಾನಿಗಳು ಮತ್ತು ಪಂಚಾಯಿತಿಯ ಸಹಕಾರದೊಂದಿಗೆ ಬಹುತೇಕವಾಗಿ ಶಾಲೆಯ ವಾತಾವರಣವನ್ನು ಕಲಿಕೆಯ ಪ್ರಯೋಗಕ್ಕೆ ವಿಸ್ತರಿಸಲಾಗಿದೆ.
ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಒದಗಿಸಿಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸ್ಥಳೀಯ ದಾನಿಗಳ ಸಹಕಾರ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘ ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಸಹಕಾರ ಬಹು ಪ್ರಮುಖವಾಗಿದೆ. ಶಾಲೆಯನ್ನು ಮಕ್ಕಳ ಕಲಿಕೆಯ ಕಡೆ ಕೊಂಡೊಯ್ಯುವ ಚಿಂತನೆ ಹೊಂದಲಾಗಿದೆ ಎಂದು ಹೇಳಿದರು.