ಸಿದ್ದಾಪುರ, ಮಾ. ೫: ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಮ್ಮೆಹೊಳೆಗೆ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಣ್ಣ ನೀರಾವರಿ ಇಲಾಖೆಯ ಅನುದಾನದಿಂದ ರೂ. ೨ ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿಯು ರೈತರ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಉದ್ದೇಶ ಹೊಂದಲಾಗಿದೆ. ಇದರಿಂದ ಅಂತರ್ಜಲ ಸಹ ವೃದ್ಧಿಯಾಗುವ ವಿಶ್ವಾಸ ಹೊಂದಲಾಗಿದೆ ಎಂದು ಪೊನ್ನಣ್ಣ ಹೇಳಿದರು.
ಕಾಮಗಾರಿಯನ್ನು ಉತ್ತಮ ಗುಣಮಟ್ಟದಲ್ಲಿ ಮಾಡುವ ಮೂಲಕ ಅತಿ ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕೆಂದು ಸೂಚಿಸಿದರು.
ಇದೇ ಸಂದರ್ಭದಲ್ಲಿ ಚಾಮುಂಡಿ ಪೈಸಾರಿಯ ಭಾಗದಲ್ಲಿ ಶಾಸಕರ ಅನುದಾನದಿಂದ ರೂ. ೧೫ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ರಸ್ತೆ ಕಾಮಗಾರಿಯನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹನೀಫ್, ವಲಯ ಕಾಂಗ್ರೆಸ್ ಅಧ್ಯಕ್ಷ ಮಚ್ಚಾರಂಡ ಕಿರಣ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಅನಿಲ್, ಚೇಕು,ಇಟ್ಟಿರ ಭವಿನ್, ಇನ್ನಿತರರು ಹಾಜರಿದ್ದರು.