ಸೋಮವಾರಪೇಟೆ, ಮಾ. ೫: ಸೋಮವಾರಪೇಟೆ ವಲಯದ ಬ್ಯಾಡಗೊಟ್ಟ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬೀಟೆ ನಾಟಾಗಳನ್ನು ಅರಣ್ಯ ಅಧಿಕಾರಿಗಳ ತಂಡ ವಶಪಡಿಸಿಕೊಂಡಿದೆ.

ಸೀಗೆಹೊಸೂರು ಗ್ರಾಮದ ಜಮೀನಿನಲ್ಲಿದ್ದ ಮರವನ್ನು ನಾಟಾಗಳನ್ನಾಗಿ ಪರಿವರ್ತಿಸಿ ವಾಹನದಲ್ಲಿ ತುಂಬಿಸಿಕೊAಡು ಮಲ್ಲೇನಹಳ್ಳಿ ಗ್ರಾಮಕ್ಕೆ ಸಾಗಿಸಲಾಗಿತ್ತು. ಮಾಹಿತಿ ಪಡೆದ ಸೋಮವಾರಪೇಟೆ ಅರಣ್ಯಾಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಬೀಟೆ ನಾಟಾಗಳು ಮತ್ತು ವಾಹನವನ್ನು ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಿದೆ.

ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆಗೆ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ಶೈಲೇಂದ್ರಕುಮಾರ್, ಡಿಆರ್‌ಎಫ್‌ಓ ಬಿ.ಎನ್.ಗುರುಪ್ರಸಾದ್, ಸಿಬ್ಬಂದಿಗಳಾದ ವರುಣ್, ಜೀವನ್, ದರ್ಶನ್, ವಿಕಾಸ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.