ಕಣಿವೆ, ಮಾ. ೫: ಬಡವರಿಗೆ ಸರ್ಕಾರ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ ವ್ಯಕ್ತಿಯನ್ನು ವಾಹನ ಸಹಿತ ಕುಶಾಲನಗರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳೀಯರ ಮಾಹಿತಿ ಹಿನ್ನೆಲೆಯಲ್ಲಿ ಕುಶಾಲನಗರದ ಆಹಾರ ಇಲಾಖೆ ಅಧಿಕಾರಿ ಸ್ವಾತಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ವಾಹನದಲ್ಲಿ ೬೯ ಕೆ.ಜಿ. ಸಂಗ್ರಹಿಸಿ ಇಟ್ಟಿದ್ದುದು ಕಂಡುಬAದ ಹಿನ್ನೆಲೆಯಲ್ಲಿ ದೂರು ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಳ್ಳುಸೋಗೆ ನಿವಾಸಿ ವಿನು ಎಂಬವರ ಮೇಲೆ ದೂರು ದಾಖಲಾಗಿದೆ.