ಮಡಿಕೇರಿ, ಮಾ. ೫: ಕೊಡಗು ಜಿಲ್ಲೆಯಲ್ಲಿ ರಾಷ್ಟಿçÃಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ ೩೧೨೫ ರೈತರಿಗೆ ವಿತರಿಸುವ ರೈತರ ಅಧ್ಯಯನ ಕೈಪಿಡಿ, ನೈಸರ್ಗಿಕ ಕೃಷಿ ರೈತರ ದಿನಚರಿ ಪುಸ್ತಕ, ನೈಸರ್ಗಿಕ ಕೃಷಿ ಕುರಿತು ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು ಮತ್ತು ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ಸೌಲಭ್ಯಗಳ ಪುಸ್ತಕಗಳನ್ನು ತಮ್ಮ ಮೈಸೂರು ಕಚೇರಿಯಲ್ಲಿ ಬಿಡುಗಡೆ ಮಾಡಿದರು.

ಈ ಯೋಜನೆಯು ಕೇಂದ್ರ ಸರ್ಕಾರದ ಶೇ. ೬೦ ರಷ್ಟು ಹಾಗೂ ರಾಜ್ಯ ಸರ್ಕಾರದ ಶೇ. ೪೦ ರಷ್ಟು ಅನುದಾನದೊಂದಿಗೆ ಕೊಡಗು ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿದೆ. ಈ ಯೋಜನೆಯಡಿ ೫೦ ಜನ ಗುಚ್ಚ ಸಂಪನ್ಮೂಲ ವ್ಯಕ್ತಿ (ಎರಡು ಗ್ರಾಮ ಪಂಚಾಯಿತಿಗಳಿಗೆ ಒಬ್ಬರಂತೆ) ೧೭ ಜನ ಸಂಪನ್ಮೂಲ ವ್ಯಕ್ತಿಗಳ ಸಹಯೋಗದೊಂದಿಗೆ ಕೊಡಗು ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿ ಅನುಸರಿಸುವ ರೈತರಿಗೆ ಮಾರ್ಗದರ್ಶನ, ತರಬೇತಿ ನೀಡಲಾಗುವುದು. ಈ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಡಾ. ಬಿ.ಎಸ್. ಚಂದ್ರಶೇಖರ್ ಮತ್ತು ಉಪ ಕೃಷಿ ನಿರ್ದೇಶಕ ಡಿ.ಎಸ್. ಸೋಮಶೇಖರ್ ಹಾಜರಿದ್ದರು.