ಕೊಡ್ಲಿಪೇಟೆ, ಮಾ. ೭: ಸಮೀಪದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಲು ವಾಗಿಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಅಂಗನವಾಡಿ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ, ಗರ್ಭಿಣಿಯರಿಗೆ ಸೀಮಂತ, ಸಣ್ಣ ಮಕ್ಕಳಿಗೆ ಅನ್ನಪ್ರಾಸನ, ಅಕ್ಷರಾಭ್ಯಾಸ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಕಮಲಮ್ಮ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರುಗಳಾದ ಕಿಶನ್, ಕೀರ್ತಿ, ರಾಮು, ದಯಾಕರ, ಇಲಾಖೆಯ ಅಧಿಕಾರಿ ಸಾವಿತ್ರಮ್ಮ, ಆಯುಷ್ಮಾನ್ ವೈದ್ಯೆ ಶೃತಿ ಉಪಸ್ಥಿತರಿದ್ದರು.