ನಾಪೋಕ್ಲು, ಮಾ. ೭: ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ವಿಜೃಂಭಣೆಯಿAದ ಸೋಮವಾರ ಸಂಪನ್ನಗೊAಡಿತು.
ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ ೧೩ ತುಲಾಭಾರ ಸೇವೆ ಬಳಿಕ ಭಕ್ತರು ವಿವಿಧ ರೀತಿಯ ಹರಕೆರೂಪದಲ್ಲಿ ಕಾಫಿ, ಕಾಳುಮೆಣಸು, ಎಣ್ಣೆ, ಮತ್ತಿತರ ಹರಕೆ ಸಲ್ಲಿಸಿದರು. ನಂತರ ದೇವಾಲಯದಲ್ಲಿ ಮಹಾಪೂಜೆ ಜರುಗಿತು ಬಳಿಕ ಎತ್ತುಪೋರಾಟ. ಭಕ್ತರಿಗೆ ಪ್ರಸಾದ ವಿತರಣೆ ಅನ್ನಸಂತರ್ಪಣೆ. ಆನಂತರ ದೇವರ ಪ್ರದರ್ಶನ ನೃತ್ಯ ಬಲಿ ಜರುಗಿತು. ತಂತ್ರಿ ಸಂತೋಷ ಹೆಬ್ಬಾರ್, ಅರ್ಚಕ ವಿಜಯಕುಮಾರ್ ಕಲ್ಲುರಾಯ, ರಾಜೇಶ್, ಜಯಚಂದ್ರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಆನಂತರ ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ಈ ಸಂದರ್ಭ ಉತ್ಸವದಲ್ಲಿ ತಕ್ಕ ಮುಖ್ಯಸ್ಥರಾದ ನಾಪನೆರವಂಡ ಪೊನ್ನಪ್ಪ, ಬಾಳೆಯಡ ರಾಜ ಕುಂಞಪ್ಪ, ಕೈಯಂದಿರ ರಮೇಶ್, ಆಡಳಿತ ಮಂಡಳಿ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ, ಕಾರ್ಯದರ್ಶಿ ಮುಕ್ಕಾಟಿರ ವಿನಯ್, ಖಜಾಂಚಿ ಮಣವಟ್ಟಿರ ಪಾಪು ಚಂಗಪ್ಪ, ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು, ಊರಿನ, ಪರ ಊರಿನ ಭಕ್ತರು ಪಾಲ್ಗೊಂಡಿದ್ದರು.