ಮಡಿಕೇರಿ, ಮಾ. ೮: ತಾಲೂಕಿನ ೮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಲು ಸಂಬAಧಪಟ್ಟ ಇಲಾಖಾಧಿಕಾರಿಗಳಿಗೆ ಶಾಸಕ ಡಾ. ಮಂತರ್ ಗೌಡ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಗಾಂಧಿ ಭವನದಲ್ಲಿ ನಡೆದ ವಿಶೇಷ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ, ಶಾಲಾ-ಕಾಲೇಜು, ಅಂಗನವಾಡಿ, ಆರೋಗ್ಯ ಕೇಂದ್ರಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಎಲ್ಲೆಡೆ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರನ್ನು ಎಂದಿನAತೆ ಸಮರ್ಪಕವಾಗಿ ಪೂರೈಸಬೇಕು.
ಕುಡಿಯುವ ನೀರಿನ ಪೂರೈಕೆಯ ಸಂದರ್ಭ ವಿದ್ಯುತ್ ಕಡಿತಗೊಳಿಸಬಾರದು. ಸಾರ್ವಜನಿಕರು ಕುಡಿಯುವ ನೀರನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಲು ನಗರಸಭೆಯಿಂದ ಆಗಾಗ್ಗೆ ಸೂಚನೆ ನೀಡಬೇಕು ಎಂದರು.
ಜಲಜೀವನ್ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬAಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಶಾಸಕರು ಅಧಿಕಾರಿಗಳಿಗೆ ಡಾ. ಮಂತರ್ ಗೌಡ ಅವರು ನಿರ್ದೇಶನ ನೀಡಿದರು.
ಬೇಸಿಗೆಯಲ್ಲಿ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ವತಿಯಿಂದ ಎಚ್ಚರವಹಿಸಬೇಕು. ಜತೆಗೆ ಜಾಗೃತಿ ಮೂಡಿಸಬೇಕು. ಶಾಲೆ, ಕಾಲೇಜು ಸೇರಿದಂತೆ ವಿವಾಹ ಸಂದರ್ಭದಲ್ಲಿ ನೀರಿನ ಟ್ಯಾಂಕ್ಗಳನ್ನು ಪರಿಶೀಲಿಸುವಂತೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಸಂಬAಧಪಟ್ಟವರಿಗೆ ಸೂಚನೆ ನೀಡಬೇಕು.
ರಾಜಕಾಲುವೆ, ಚರಂಡಿಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗಲು ತುರ್ತಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆಗಳಿಗೆ ಅಡ್ಡವಾಗಿ ಬೆಳೆದಿರುವ ಗಿಡಗಂಟಿಗಳನ್ನು ಕಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಪ್ರಗತಿ ಬಗ್ಗೆ ಸಂಬAಧಪಟ್ಟ ಇಂಜಿನಿಯರ್ ಅವರಿಂದ ಶಾಸಕರು ಮಾಹಿತಿ ಪಡೆದರು. ತಾ.ಪಂ. ಇಒ ಶೇಖರ್ ಮಾತನಾಡಿ, ಈಗಾಗಲೇ ಗ್ರಾ.ಪಂ. ಮಟ್ಟದಲ್ಲಿ ಟಾಸ್ಕ್ಫೋರ್ಸ್ ಸಭೆ ನಡೆಸಲಾಗಿದ್ದು, ಕುಡಿಯುವ ನೀರು ಮತ್ತು ಜಾನುವಾರಿಗೆ ಮೇವು ಸಂಬAಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.
ನಗರಸಭೆ ಪೌರಾಯುಕ್ತ ಹೆಚ್.ಆರ್. ರಮೇಶ್, ತಾ.ಪಂ. ಆಡಳಿತಾಧಿಕಾರಿ ಚಂದ್ರಶೇಖರ್, ತಹಶೀಲ್ದಾರ್ ಶ್ರೀಧರ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಶಶಿಧರ್, ಸೆಸ್ಕ್ ಎಇಇ ವಿನಯ ಕುಮಾರ್, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾ.ಪಂ. ಆಡಳಿತಾಧಿಕಾರಿಗಳು, ಪಿಡಿಓಗಳು, ಗ್ರಾಮ ಆಡಳಿತಾಧಿಕಾರಿ ಇತರರು ಹಾಜರಿದ್ದರು.